Featured

ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದ ಕಾಂಗ್ರೆಸ್ ವರಸೆ ಬದಲು

ನವದೆಹಲಿ: ಮೊನ್ನೆಯಷ್ಟೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ ಗಾಂಧಿಯನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದ ಕಾಂಗ್ರೆಸ್ ಇದೀಗ ವರಸೆ ಬದಲಿಸಿದೆ.

ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ಬೆಂಬಲ ಕಷ್ಟ ಎಂದು ಅರಿತ ಕಾಂಗ್ರೆಸ್ ಇದೀಗ ಆರ್ ಎಸ್ ಎಸ್ ಮತ್ತು ಬಿಜೆಪಿ ಸೋಲಿಸುವ ಸಾಮರ್ಥ್ಯವಿರುವ ಯಾರಿಗೇ ಆದರೂ ತನ್ನ ಬೆಂಬಲವಿದೆ ಎಂದು ಹೇಳಿಕೊಂಡಿದೆ.

ಸ್ವತಃ ರಾಹುಲ್ ಗಾಂಧಿ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಮಹಿಳಾ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್ ಈ ರೀತಿ ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಸೀಟು ಗೆಲ್ಲುವುದು ನಮ್ಮ ಗುರಿ ಎಂದಿದ್ದಾರೆ. ಈ ಎರಡು ರಾಜ್ಯಗಳಲ್ಲಿ ಮಿತ್ರ ಪಕ್ಷಗಳೊಂದಿಗೆ ಸಖ್ಯ ಬೆಳೆಸಲು ಸಿದ್ಧರಾಗಿರುವುದಾಗಿ ಅವರು ಹೇಳಿದ್ದಾರೆ. ಈ ಎರಡು ರಾಜ್ಯಗಳು ಅತೀ ಹೆಚ್ಚು ಲೋಕಸಭೆ ಸ್ಥಾನಗಳನ್ನು ಹೊಂದಿವೆ.

ಹೀಗಾಗಿ ಇದೀಗ ಪ್ರಧಾನಿ ಹುದ್ದೆ ರೇಸ್ ನಲ್ಲಿ ಮಾಯಾವತಿ ಮತ್ತು ಮಮತಾ ಬ್ಯಾನರ್ಜಿ ಹೆಸರುಗಳು ಮುಂಚೂಣಿಗೆ ಬಂದಿವೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

9 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

10 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

10 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

11 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

14 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

14 hours ago