Featured

ರಾಹುಲ್‌ ಗಾಂಧಿ ಇ.ಡಿ ವಿಚಾರಣೆ : ಸುಳ್ಳು ಕೇಸ್ ಹಾಕಿ ಬೆದರಿಸುವ ಯತ್ನ , ಜೈಲಿಗೆ ಹಾಕುತ್ತಾರಾ ಹಾಕಲಿ : ಬಿಜೆಪಿ ವಿರುದ್ಧ ಡಿಕೆ ಶಿ – Vishwanews24

ರಾಹುಲ್ ಗಾಂಧಿ ವಿರುದ್ಧ ಇದು ರಾಜಕೀಯ ದುರುದ್ಧೇಶದ ಕ್ರಮ..

ಗಾಂಧಿ ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು..

RSS , ವಿಶ್ವ ಹಿಂದು ಪರಿಷತ್‌ನವರು ಒಬ್ಬರಾದರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರಾ?

ಗಾಂಧಿ ಕುಟುಂಬ ಅವರ ಆಸ್ತಿಯನ್ನು ದೇಶಕ್ಕಾಗಿ ಬರೆದು ಕೊಟ್ಟಿದ್ದಾರೆ..

ರಾಜಭವನ ಚಲೋ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೇಸ್ ನಾಯಕರ ಆಕ್ರೋಶ..

ಬೆಂಗಳೂರು: ‘ಜೈಲಿಗೆ ಹಾಕ್ತಾರಾ ಹಾಕಲಿ, ತೊಂದರೆ ಕೊಡ್ತಾರಾ ಕೊಡಲಿ’. ಇದು ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್‌ ಗಾಂಧಿಯನ್ನು ಇ.ಡಿ ವಿಚಾರಣೆ ನಡೆಸುತ್ತಿರುವುದು ಹಾಗೂ ದೆಹಲಿ ಪೊಲೀಸರ ವರ್ತನೆಯನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ರಾಜಭವನ ಚಲೋ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಅವರು, ಸುಳ್ಳು ಕೇಸ್ ಹಾಕಿ ಬೆದರಿಸುವ ಯತ್ನ ಇದಾಗಿದೆ. ಅವರು ಜೈಲಿಗೆ ಹಾಕುತ್ತಾರಾ ಹಾಕಲಿ,‌‌ ತೊಂದರೆ ಕೊಡುತ್ತಿದ್ದಾರಾ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ ಕೇಸ್ ಹಾಕಲ್ಲ ಎಂದು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್, ವಿಪಕ್ಷಗಳ ವಿರುದ್ಧ ಆಡಳಿತ ಪಕ್ಷ ಬಿಜೆಪಿ ದ್ವೇಷ ಸಾಧಿಸುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿ, ಕಾಂಗ್ರೆಸ್ ಕಚೇರಿಗೆ ಬಂದು ಕಾರ್ಯಕರ್ತರನ್ನು ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಹಲ್ಲೆ ಮಾಡಿದ್ದಾರೆ. ಈ ಮೂಲಕ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. , ‘ರಾಹುಲ್ ಗಾಂಧಿ ವಿರುದ್ಧ ಇದು ರಾಜಕೀಯ ದುರುದ್ಧೇಶದ ಕ್ರಮ’ ಎಂದು ಅಸಹನೆ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಮಾತನಾಡಿ, ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿಗೆ ಹೋಗಲು ಬಿಡುತ್ತಿಲ್ಲ.‌ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಕೈಗೆ ಗಾಯ ಮಾಡಿದ್ದಾರೆ. ದಿನೇ

ಶ್ ಗುಂಡೂರಾವ್, ಹೆಚ್ ಕೆ ಪಾಟೀಲ್ ರನ್ನ ತಳ್ಳಿದ್ದಾರೆ. ಬಿ.ವಿ ಶ್ರೀನಿವಾಸ್‌ಗೆ ಬೂಟ್ ಗಾಲಿನಲ್ಲಿ ಒದ್ದಿದ್ದಾರೆ ಎಂದು ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದರು.

ಇನ್ನು, ‘ಗಾಂಧಿ ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಅವರ ಆಸ್ತಿಯನ್ನು ದೇಶಕ್ಕಾಗಿ ಬರೆದು ಕೊಟ್ಟಿದ್ದಾರೆ ಎಂದ ರಾಮಲಿಂಗಾ ರೆಡ್ಡಿ, ಬಿಜೆಪಿಯವರು ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಆರ್.ಎಸ್.ಎಸ್, ವಿಶ್ವ ಹಿಂದು ಪರಿಷತ್‌ನವರು ಒಬ್ಬರಾದರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರಾ? ಎಂದು ಪ್ರಶ್ನಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago