ಬೆಂಗಳೂರು: ‘ಜೈಲಿಗೆ ಹಾಕ್ತಾರಾ ಹಾಕಲಿ, ತೊಂದರೆ ಕೊಡ್ತಾರಾ ಕೊಡಲಿ’. ಇದು ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇ.ಡಿ ವಿಚಾರಣೆ ನಡೆಸುತ್ತಿರುವುದು ಹಾಗೂ ದೆಹಲಿ ಪೊಲೀಸರ ವರ್ತನೆಯನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ರಾಜಭವನ ಚಲೋ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಸುಳ್ಳು ಕೇಸ್ ಹಾಕಿ ಬೆದರಿಸುವ ಯತ್ನ ಇದಾಗಿದೆ. ಅವರು ಜೈಲಿಗೆ ಹಾಕುತ್ತಾರಾ ಹಾಕಲಿ, ತೊಂದರೆ ಕೊಡುತ್ತಿದ್ದಾರಾ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಾಯಕರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ ಕೇಸ್ ಹಾಕಲ್ಲ ಎಂದು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್, ವಿಪಕ್ಷಗಳ ವಿರುದ್ಧ ಆಡಳಿತ ಪಕ್ಷ ಬಿಜೆಪಿ ದ್ವೇಷ ಸಾಧಿಸುತ್ತಿದೆ ಎಂದು ಕಿಡಿಕಾರಿದರು.
ಇದೇ ವೇಳೆ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿ, ಕಾಂಗ್ರೆಸ್ ಕಚೇರಿಗೆ ಬಂದು ಕಾರ್ಯಕರ್ತರನ್ನು ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಹಲ್ಲೆ ಮಾಡಿದ್ದಾರೆ. ಈ ಮೂಲಕ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. , ‘ರಾಹುಲ್ ಗಾಂಧಿ ವಿರುದ್ಧ ಇದು ರಾಜಕೀಯ ದುರುದ್ಧೇಶದ ಕ್ರಮ’ ಎಂದು ಅಸಹನೆ ವ್ಯಕ್ತಪಡಿಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಮಾತನಾಡಿ, ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿಗೆ ಹೋಗಲು ಬಿಡುತ್ತಿಲ್ಲ. ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಕೈಗೆ ಗಾಯ ಮಾಡಿದ್ದಾರೆ. ದಿನೇ
ಶ್ ಗುಂಡೂರಾವ್, ಹೆಚ್ ಕೆ ಪಾಟೀಲ್ ರನ್ನ ತಳ್ಳಿದ್ದಾರೆ. ಬಿ.ವಿ ಶ್ರೀನಿವಾಸ್‌ಗೆ ಬೂಟ್ ಗಾಲಿನಲ್ಲಿ ಒದ್ದಿದ್ದಾರೆ ಎಂದು ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದರು.
ಇನ್ನು, ‘ಗಾಂಧಿ ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಅವರ ಆಸ್ತಿಯನ್ನು ದೇಶಕ್ಕಾಗಿ ಬರೆದು ಕೊಟ್ಟಿದ್ದಾರೆ ಎಂದ ರಾಮಲಿಂಗಾ ರೆಡ್ಡಿ, ಬಿಜೆಪಿಯವರು ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಆರ್.ಎಸ್.ಎಸ್, ವಿಶ್ವ ಹಿಂದು ಪರಿಷತ್‌ನವರು ಒಬ್ಬರಾದರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದಾರಾ? ಎಂದು ಪ್ರಶ್ನಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…