ಚುನಾವಣೆ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಜೆಡಿಎಸ್ ನ್ನು ಬಿಜೆಪಿಯ ಬಿ-ಟೀಂ ಎಂದು ಕರೆಯದೇ ಇದ್ದರೆ ಜೆಡಿಎಸ್ 70 ಸ್ಥಾನ ಗಳಿಸುತ್ತಿತ್ತು. ಬಿಜೆಪಿ 70 ಸ್ಥಾನ ದಾಟುತ್ತಿರಲಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ನಿನ್ನೆ ವಿಧಾನಸಭೆಯ ಚರ್ಚೆ ವೇಳೆ ಮಧ್ಯಪ್ರವೇಶಿಸಿದ ರೇವಣ್ಣ ಅವರು, ಚುನಾವಣೆಗೆ ಮುನ್ನ ಹಾಸನದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೆಡಿಎಸ್ ಬಿಜೆಪಿಯ ಬಿ-ಟೀಂ ಇದ್ದಂತೆ ಹೇಳಿದ್ದರು. ಅದರ ಪರಿಣಾಮ ನಮಗೆ 30 ಸ್ಥಾನಗಳು ಕಡಿಮೆಯಾದವು. ಬಿಜೆಪಿ 110 ಸ್ಥಾನ ಗಳಿಸಲು ಆ ಹೇಳಿಕೆಗೆ ಕಾರಣ. ಬಿಜೆಪಿ ಗೆದ್ದಿರುವ ಸ್ಥಾನಗಳಲ್ಲಿ 30 ಕ್ಷೇತ್ರಗಳ್ಲಲಿ ಜೆಡಿಎಸ್ ಗೆಲ್ಲಬೇಕಿತ್ತು. ರಾಹುಲ್ ಹೇಳಿಕೆಯಿಂದ ನಾವು ಸೋಲು ಕಂಡೆವು. ಇಲ್ಲವಾಗಿದ್ದರೆ ಜೆಡಿಎಸ್ 70 ಸ್ಥಾನಗಳನ್ನು ಗೆಲ್ಲುತ್ತಿತ್ತು. ಬಿಜೆಪಿ 70 ಸ್ಥಾನಕ್ಕೆ ನಿಲ್ಲುತ್ತಿತ್ತು ಎಂದು ಹೇಳಿದರು.
ಆಗ ಮಧ್ಯಪ್ರವೇಶಿಸಿದ ಬಿಜೆಪಿಯ ಬಸವರಾಜ್ ಬೊಮ್ಮಾಯಿ ಅವರು ರಾಹುಲ್ ಗಾಂಧಿ ಅವರ ಹೇಳಿಕೆ ಸತ್ಯವೋ ಸುಳ್ಳೋ ಎಂಬುದನ್ನು ಸ್ಪಷ್ಟಪಡಿಸಿ ಎಂದರು. ಬಿಜೆಪಿ ಇನ್ನೊಬ್ಬ ಸದಸ್ಯ ಅರವಿಂದಲಿಂಬಾವಳಿ, ರೇವಣ್ಣ ಮಾತು ಆರಂಭಿಸುವ ಮುನ್ನವೇಸತ್ಯ ಹೇಳುತ್ತೇನೆ ಎಂದಿದ್ದಾರೆ. ಹಾಗಾಗಿ ಅವರು ಹೇಳಿರುವುದೆಲ್ಲ ಸತ್ಯ ಎಂದರು. ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಿದ್ದರಿಂದ ಜೆಡಿಎಸ್ 38 ಸ್ಥಾನ ಗೆದ್ದಿದೆ. ಇಲ್ಲದಿದ್ದೆ ಇನ್ನು ಕಡಿಮೆ ಕ್ಷೇತ್ರಗಳ್ಲಲಿ ಗೆಲ್ಲುತ್ತಿತ್ತು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಮಧ್ಯಪ್ರವೇಶಿಸಿದ ರಮೇಶ್‍ಕುಮಾರ್ ಅವರು , ರಾಹುಲ್ ಹೇಳಿಕೆಯಿಂದ ಜೆಡಿಎಸ್ -ಬಿಜೆಪಿ ಇಬ್ಬರಿಗೂ ಲಾಭವಾಗಿದೆ. ನೀವು ಅವರಿಗೆ ಥ್ಯಾಂಕ್ಸ ಹೇಳಿ, ನಾವು ರಾಹುಲ್‍ಗೆ ಥ್ಯಾಂಕ್ಸ್ ಹೇಳುತ್ತೇವೆ ಎಂದು ಚರ್ಚೆಗೆ ತೆರೆ ಎಳೆದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…