Featured

ರಾಹುಲ್ ಗಾಂಧಿ ಜೆಡಿಎಸ್ ವಿರುದ್ಧ ಸುಳ್ಳು ಆರೋಪ ಮಾಡದಿದ್ದರೆ ನಾವು 70 ಸ್ಥಾನ ಗೆಲ್ಲುತ್ತಿದ್ದೆವು!: ರೇವಣ್ಣ

ಚುನಾವಣೆ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಜೆಡಿಎಸ್‍ ನ್ನು ಬಿಜೆಪಿಯ ಬಿ-ಟೀಂ ಎಂದು ಕರೆಯದೇ ಇದ್ದರೆ ಜೆಡಿಎಸ್ 70 ಸ್ಥಾನ ಗಳಿಸುತ್ತಿತ್ತು. ಬಿಜೆಪಿ 70 ಸ್ಥಾನ ದಾಟುತ್ತಿರಲಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ನಿನ್ನೆ ವಿಧಾನಸಭೆಯ ಚರ್ಚೆ ವೇಳೆ ಮಧ್ಯಪ್ರವೇಶಿಸಿದ ರೇವಣ್ಣ ಅವರು, ಚುನಾವಣೆಗೆ ಮುನ್ನ ಹಾಸನದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಜೆಡಿಎಸ್ ಬಿಜೆಪಿಯ ಬಿ-ಟೀಂ ಇದ್ದಂತೆ ಹೇಳಿದ್ದರು. ಅದರ ಪರಿಣಾಮ ನಮಗೆ 30 ಸ್ಥಾನಗಳು ಕಡಿಮೆಯಾದವು. ಬಿಜೆಪಿ 110 ಸ್ಥಾನ ಗಳಿಸಲು ಆ ಹೇಳಿಕೆಗೆ ಕಾರಣ. ಬಿಜೆಪಿ ಗೆದ್ದಿರುವ ಸ್ಥಾನಗಳಲ್ಲಿ 30 ಕ್ಷೇತ್ರಗಳ್ಲಲಿ ಜೆಡಿಎಸ್ ಗೆಲ್ಲಬೇಕಿತ್ತು. ರಾಹುಲ್ ಹೇಳಿಕೆಯಿಂದ ನಾವು ಸೋಲು ಕಂಡೆವು. ಇಲ್ಲವಾಗಿದ್ದರೆ ಜೆಡಿಎಸ್ 70 ಸ್ಥಾನಗಳನ್ನು ಗೆಲ್ಲುತ್ತಿತ್ತು. ಬಿಜೆಪಿ 70 ಸ್ಥಾನಕ್ಕೆ ನಿಲ್ಲುತ್ತಿತ್ತು ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ಬಿಜೆಪಿಯ ಬಸವರಾಜ್ ಬೊಮ್ಮಾಯಿ ಅವರು ರಾಹುಲ್ ಗಾಂಧಿ ಅವರ ಹೇಳಿಕೆ ಸತ್ಯವೋ ಸುಳ್ಳೋ ಎಂಬುದನ್ನು ಸ್ಪಷ್ಟಪಡಿಸಿ ಎಂದರು. ಬಿಜೆಪಿ ಇನ್ನೊಬ್ಬ ಸದಸ್ಯ ಅರವಿಂದಲಿಂಬಾವಳಿ, ರೇವಣ್ಣ ಮಾತು ಆರಂಭಿಸುವ ಮುನ್ನವೇಸತ್ಯ ಹೇಳುತ್ತೇನೆ ಎಂದಿದ್ದಾರೆ. ಹಾಗಾಗಿ ಅವರು ಹೇಳಿರುವುದೆಲ್ಲ ಸತ್ಯ ಎಂದರು. ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಿದ್ದರಿಂದ ಜೆಡಿಎಸ್ 38 ಸ್ಥಾನ ಗೆದ್ದಿದೆ. ಇಲ್ಲದಿದ್ದೆ ಇನ್ನು ಕಡಿಮೆ ಕ್ಷೇತ್ರಗಳ್ಲಲಿ ಗೆಲ್ಲುತ್ತಿತ್ತು ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

ಮಧ್ಯಪ್ರವೇಶಿಸಿದ ರಮೇಶ್‍ಕುಮಾರ್ ಅವರು , ರಾಹುಲ್ ಹೇಳಿಕೆಯಿಂದ ಜೆಡಿಎಸ್ -ಬಿಜೆಪಿ ಇಬ್ಬರಿಗೂ ಲಾಭವಾಗಿದೆ. ನೀವು ಅವರಿಗೆ ಥ್ಯಾಂಕ್ಸ ಹೇಳಿ, ನಾವು ರಾಹುಲ್‍ಗೆ ಥ್ಯಾಂಕ್ಸ್ ಹೇಳುತ್ತೇವೆ ಎಂದು ಚರ್ಚೆಗೆ ತೆರೆ ಎಳೆದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago