Featured

ರಾಹುಲ್ ಗಾಂಧಿ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಆಶಯ : ಸಿದ್ದರಾಮಯ್ಯ – Vishwanews24

ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ..

ನರೇಂದ್ರ ಮೋದಿ ಹಾಗೂ ಬಿಜೆಪಿಯಿಂದ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ..

ಈಗಿರುವ ಬಿಜೆಪಿ ಸರ್ಕಾರದಂಥ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿರಲಿಲ್ಲ..

ದೇಶದಲ್ಲಿ ಇಂದು ಎದ್ದು ಕಾಡುತ್ತಿರುವ ಸಮಸ್ಯೆಗಳಿಗೆ ರಾಹುಲ್ ಗಾಂಧಿ ಒಬ್ಬರೇ ಪರಿಹಾರ..

ಬೆಂಗಳೂರು: ಬೇರೆ ಪಕ್ಷದಿಂದ ಬಂದರೂ ಸಹ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ನನ್ನ ಮುಖ್ಯಮಂತ್ರಿ ಮಾಡಿ ಆಡಳಿತ ನಡೆಸಲು ಸಂಪೂರ್ಣ ಸಹಕಾರ ನೀಡಿದರು. ನನ್ನ ಅಧಿಕಾರ ಅವಧಿಯಲ್ಲಿ ಐದು ವರ್ಷಗಳ ಕಾಲ ಬಂಡೆಯಂತೆ ನಿಂತು ಬೆಂಬಲ ನೀಡಿದ್ದಾರೆ. 75 ವರ್ಷಗಳ ಸಕ್ರಿಯ ರಾಜಕಾರಣದಲ್ಲಿ 50 ವರ್ಷಗಳಿಂದ ಜನರೊಂದಿಗೆ ಇದ್ದೇನೆ. ಇಂದಿನವರೆಗೂ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ನಡುವೆ ಭಿನ್ನಾಭಿಪ್ರಾಯ ಇಲ್ಲ: ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಬಿರುಕಿದೆ ಎಂದು ತಪ್ಪು ಮಾಹಿತಿಯನ್ನು ಜನರಿಗೆ ನೀಡುವ ಕಾರ್ಯವನ್ನು ಸಾಕಷ್ಟು ಜನ ಮಾಡುತ್ತಿದ್ದಾರೆ. 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲು ಡಿಕೆಶಿ ವಿರೋಧ ಇದೆ ಎಂದು ಬಿಂಬಿಸುತ್ತಿದ್ದಾರೆ. ಇದು ಅವರ ಭ್ರಮೆ ಹಾಗೂ ಕೆಲ ಮಾಧ್ಯಮಗಳ ಸೃಷ್ಟಿ. ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈಗಿರುವುದು ಭ್ರಷ್ಟ ಸರ್ಕಾರ: ಇಂದು ನಮ್ಮ ಮುಂದಿರುವ ಏಕೈಕ ಸವಾಲು ರಾಜ್ಯದಲ್ಲಿ ಅಧಿಕಾರದಲ್ಲಿರುವ ಭ್ರಷ್ಟ ಹಾಗೂ ಕೋಮುವಾದಿ ಸರ್ಕಾರವನ್ನು ತೊಲಗಿಸುವುದು. ಈ ಜನಪೀಡಕ ಸರ್ಕಾರವನ್ನು ಕಿತ್ತೊಗೆದು ರಾಹುಲ್ ಗಾಂಧಿ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಆಶಯ. ಇದಕ್ಕೆ ಜನರ ಆಶೀರ್ವಾದ ಬೇಕು. ನಾನು 44 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿ ಇದ್ದೇನೆ. ಈಗಿರುವ ಬಿಜೆಪಿ ಸರ್ಕಾರದಂಥ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲಿ ನೋಡಿರಲಿಲ್ಲ ಎಂದರು.

ಬಿಜೆಪಿಗೆ ಎಚ್ಚರಿಕೆ: ಪ್ರಜಾಪ್ರಭುತ್ವ ಇಂದು ಸಂಕಷ್ಟದಲ್ಲಿದೆ. ಸಂವಿಧಾನಕ್ಕೆ ರಕ್ಷಣೆ ಇಲ್ಲ. ಭಾರತೀಯ ಜನತಾ ಪಕ್ಷದವರು ಸ್ವಾತಂತ್ರ್ಯ ತಂದುಕೊಟ್ಟ ಹೋರಾಟದಲ್ಲಿ ಯಾವುದೇ ಪಾತ್ರ ನಿರ್ವಹಿಸಿಲ್ಲ. ಅವರು ಅಧಿಕಾರಕ್ಕೆ ಬಂದಿರುವುದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಹಾಗೂ ಲೂಟಿ ಹೊಡೆಯಬೇಕು ಎಂಬ ಉದ್ದೇಶಕ್ಕೆ. ಈ ದೇಶದ ಸಂವಿಧಾನವನ್ನು ಬದಲಾಯಿಸಬೇಕು ಎಂಬುದು ಅವರ ಆಶಯವಾಗಿದೆ. ನರೇಂದ್ರ ಮೋದಿ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ಒಂದು ಎಚ್ಚರಿಕೆ ನೀಡಲು ಬಯಸುತ್ತೇನೆ. ನಿಮ್ಮಿಂದ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ ಎಂದರು.

ಸಂವಿಧಾನವನ್ನು ಬದಲಾಯಿಸಲು ಈ ನಾಡಿನ ಜನ ಬಿಡಲ್ಲ. ನಿಮ್ಮ ಕನಸು ನನಸಾಗಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿಯವರು ದೇಶದ ಆಶಾಕಿರಣ. ದೇಶದಲ್ಲಿ ಇಂದು ಎದ್ದು ಕಾಡುತ್ತಿರುವ ಸಮಸ್ಯೆಗಳಿಗೆ ರಾಹುಲ್ ಗಾಂಧಿ ಒಬ್ಬರೇ ಪರಿಹಾರ ಎಂದು ಹೇಳಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

5 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

6 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

6 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

6 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

6 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago