Featured

ರಾಹುಲ್‌ ಗಾಂಧಿ ಪಿಎ ಎಂದು ಕರೆ ಮಾಡಿ ಯು.ಟಿ. ಖಾದರ್ ಗೆ ವಂಚನೆಗೆ ಯತ್ನ : ಸೈಬರ್ ಕ್ರೈಂಗೆ ದೂರು – ಪ್ರಕರಣ ದಾಖಲು – VIshwanews24

ರಾಹುಲ್‌ ಗಾಂಧಿ ಪಿಎ ಎಂದು ಕರೆ ಮಾಡಿ ಯು.ಟಿ. ಖಾದರ್ ಗೆ ವಂಚನೆಗೆ ಯತ್ನ : ಸೈಬರ್ ಕ್ರೈಂಗೆ ದೂರು – ಪ್ರಕರಣ ದಾಖಲು

ಮಂಗಳೂರು: ರಾಹುಲ್‌ ಗಾಂಧಿ ಪಿಎ ಎಂದು ಹೇಳಿಕೊಂಡು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್‌ ಗೆ ಕರೆ ಮಾಡಿ ವಂಚಿಸಲು ಯತ್ನಿಸಿರುವಂತಹ ಘಟನೆ ನಡೆದಿದೆ. ಅಪರಿಚಿತ ಸಂಖ್ಯೆಯಿಂದ ಯು.ಟಿ ಖಾದರ್‌ ಮೊಬೈಲ್‌ಗೆ 2 ಸಲ ಫೋನ್‌ ಮಾಡಿದ್ದಾರೆ.

ಯು.ಟಿ. ಖಾದರ್ ಅವರ ಸಮಯ ಪ್ರಜ್ಞೆಯಿಂದ ಮೋಸ ಹೋಗುವುದು ತಪ್ಪಿದೆ. ವಿಷಯ ಗೊತ್ತಾದ ತಕ್ಷಣ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ದೂರು ನೀಡಿದ್ದು, ಖಾದರ್ ಅವರಿಗೆ ವಂಚಿಸಲು ಯತ್ನಿಸಿದ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ ಮಧ್ಯಾಹ್ನ ಯು.ಟಿ.ಖಾದರ್ ಅವರ ಮೊಬೈಲ್ ಗೆ 8146006626 ನಂಬರ್‌ನಿಂದ ಕರೆ ಬಂದಿತ್ತು. ಸಭೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ತಕ್ಷಣ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ‘Good afternoon this side Kaniskha Singh pa to sri rahul Gandhi ji call me’ ಎಂದು ಬರೆಯಲಾಗಿತ್ತು. ಈ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ .ಕೆ.ಸಿ. ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರು ಕಾಲರ್ ಮೂಲಕ ತಿಳಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

1 hour ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

1 hour ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago