Featured

ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ನಮ್ಮ ಅಭ್ಯಂತರವಿಲ್ಲ : ದೇವೇಗೌಡ

ಈಗಾಗಲೇ ಸಿಡಬ್ಲುಸಿ ಸಭೆಯಲ್ಲಿ ಕಾಂಗ್ರೆಸ್​ನಿಂದ ರಾಹುಲ್​ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎಂದು ನಿರ್ಧಾರ ಮಾಡಲಾಗಿತ್ತು. ಆದರೆ, ಈ ನಿರ್ಣಯವನ್ನು ಮಿತ್ರಪಕ್ಷಗಳು ಬೆಂಬಲಿಸುತ್ತವೆಯೇ ಅಥವಾ ವಿರೋಧ ವ್ಯಕ್ತಪಡಿಸುತ್ತವೆಯೇ ಎಂಬ ಅನುಮಾನವೂ ಇತ್ತು. ಅದಕ್ಕೆಲ್ಲ ತೆರೆ ಎಳೆದಿರುವ ಹಿರಿಯ ರಾಜಕಾರಣಿ ಮತ್ತು ಜೆಡಿಎಸ್​ ರಾಷ್ಟ್ರಾಧ್ಯಕ್ಷ ಹೆಚ್​.ಡಿ. ದೇವೇಗೌಡರು ಜೆಡಿಎಸ್​ನ ಬೆಂಬಲವನ್ನು ಕಾಂಗ್ರೆಸ್​ಗೆ ನೀಡಿದ್ದಾರೆ.ರಾಹುಲ್​ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ನಮ್ಮ ಅಭ್ಯಂತರವಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್- ಕಾಂಗ್ರೆಸ್​ ಮೈತ್ರಿ ಮುಂದುವರಿಯಲಿದೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಅಚ್ಚರಿ ಮೂಡಿಸಿದ್ದಾರೆ.

ಮಹಾಮೈತ್ರಿಯಲ್ಲಿ ಅತ್ಯಂತ ಹಿರಿಯ ರಾಜಕಾರಣಿ ಮತ್ತು ಮಾಜಿ ಪ್ರಧಾನಿಯೂ ಆಗಿರುವ ದೇವೇಗೌಡರೇ ಮುಂದಿನ ಪ್ರಧಾನಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿತ್ತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳೊಂದಿಗೆ ಸೇರಿ ಕಣಕ್ಕಿಳಿಯುವ ಮೂಲಕ ತೃತೀಯರಂಗದ ಪಕ್ಷಗಳು ಒಗ್ಗಟ್ಟಾಗಿ ಎನ್​ಡಿಎ ವಿರುದ್ಧ ನಿಲ್ಲಲು ತಂತ್ರ ರೂಪಿಸಿದ್ದವು. ಆದರೆ ಮುಂದಿನ ಅವಧಿಗೆ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ಅಭ್ಯಂತರವಿಲ್ಲ ಎನ್ನುವ ಮೂಲಕ ಬೆಂಬಲ ಸೂಚಿಸಿರುವ ದೇವೇಗೌಡರ ನಡೆಯ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರವಿದೆ. ಈ ಮೈತ್ರಿ ಲೋಕಸಭಾ ಚುನಾವಣೆಗೂ ಮುಂದುವರಿಯಲಿದೆ ಎಂದು ದೇವೇಗೌಡರು ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago