Featured

ರಾಹುಲ್ ಗಾಂಧಿ ರಾಜೀನಾಮೆ ನಿರ್ಧಾರ : ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ : ಪ್ರಿಯಾಂಕಾ ಗಾಂಧಿ -Vishwanews24

ನವದೆಹಲಿ: ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷಗಾದಿ ತೊರೆಯಲು ನಿರ್ಧರಿಸಿದ್ದ ರಾಹುಲ್ ಗಾಂಧಿ ಕೊನೆಗೂ ಯಾರ ಮನವೊಲಿಕೆಗೂ ಬಗ್ಗದೆ ರಾಜೀನಾಮೆ ನೀಡಿದ್ದಾರೆ. ರಾಹುಲ್​ರ ಈ ನಿರ್ಧಾರವನ್ನು ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲಿಸಿದ್ದು, ಇಂತಹ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಕೆಲವರಿಗೆ ಮಾತ್ರ ಇರುತ್ತದೆ ಎಂದು ತಿಳಿಸಿದ್ದಾರೆ.

ರಾಹುಲ್​ ಗಾಂಧಿ ರಾಜೀನಾಮೆ ಕುರಿತು ಗುರುವಾರ ಬೆಳಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ರಾಹುಲ್​ ಗಾಂಧಿ ರಾಜೀನಾಮೆ ಪತ್ರದ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿ ಕಾಂಗ್ರೆಸ್​ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಧೈರ್ಯ ತೋರಿರುವ ರಾಹುಲ್​ ಗಾಂಧಿ ಬಗ್ಗೆ ಗೌರವವಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆ ನಿರ್ಧಾರದ ಜತೆಗೆ ರಾಹುಲ್ ನಾಲ್ಕು ಪುಟಗಳ ವಿದಾಯ ಪತ್ರವನ್ನೂ ಟ್ವಿಟ್ಟರ್​ನಲ್ಲಿ ಪ್ರಕಟಿಸಿದ್ದಾರೆ. ಪತ್ರದ ಮೊದಲ ಪುಟದಲ್ಲಿ ಸೋಲಿನ ಆತ್ಮಾವಲೋಕನದ ಬಗ್ಗೆ ಉಲ್ಲೇಖವಿದ್ದರೆ, ಮುಂದಿನ 3 ಪುಟಗಳಲ್ಲಿ ಬಿಜೆಪಿ, ಆರ್​ಎಸ್​ಎಸ್ ಮೋದಿಮಯವಾಗಿವೆ. ಚುನಾವಣೆ ಸೋಲಿಗೆ ಆಡಳಿತಾರೂಢ ಪಕ್ಷದ ಸರ್ವಾಧಿಕಾರ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago