Featured

ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ನೀಡಿದ ತೀರ್ಪುನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ – VIshwnaews24

ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ನೀಡಿದ ತೀರ್ಪುನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ನೀಡಿದ ತೀರ್ಪುನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಗುರುವಾರ ನಗರದ ಮಲ್ಲಿಕಟ್ಟೆಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿತು.

ಬಿಜೆಪಿ ಸರ್ಕಾರ ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿ ರಾಹುಲ್ ಗಾಂಧಿ ಅವರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ. 2019ರ ಲೋಕಸಭಾ ಚುನಾವಣಾ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ದೇಶದಲ್ಲಿ ನಡೆಯುತ್ತಿರುವ ಸತ್ಯಾಂಶದ ಕುರಿತು ಮಾತನಾಡಿದ್ದಾರೆ. ಪ್ರಧಾನಿ ಹೆಸರನ್ನು ಉಲ್ಲೇಖಿಸದೆ ನೀರವ್ ಮೋದಿ, ಲಲಿತ್ ಮೋದಿ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದ್ದರು. ಆದರೆ ಬಿಜೆಪಿ ಸರ್ಕಾರ ನಿಯೋಜಿತವಾಗಿ ಅವರ ವಿರುದ್ಧ ಷಡ್ಯಂತರ ರೂಪಿಸಿದೆ ಎಂದು ಪ್ರಧಾನಿ ಮೋದಿ ಅವರ ಪೋಟೊಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ರಾಜ್ಯ ಕಾರ್ಯದರ್ಶಿ ನಾಸೀರ್ ಸಾಮಾಣಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ಪೂಜಾರಿ, ಇಸ್ಮಾಯೀಲ್ ಬಿ.ಎಸ್, ಫಯಾಝ್ ಅಮ್ಮೆಮ್ಮಾರ್, ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕ ಸುಹಾನ್ ಎಸ್‌.ಕೆ, ಜಿಲ್ಲಾ ಕಾರ್ಯದರ್ಶಿ ಮಾಲ್ಕೊಂ ಡಿಸೋಜ, ಮಹೇಶ್ ಕೊಂಚಾಡಿ, ಎನ್‌.ಎಸ್‌.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಸಮರ್ಥ್ ಭಟ್, ಶಾಹಿಲ್ ಎಕೆ, ಒಂ ಶ್ರೀ, ರಶೀದ್ ಉಳ್ಳಾಲ, ಅಲ್ತಾಫ್ ದೇರಳಕಟ್ಟೆ, ಶಿಯಾಝ್, ನಿಯಾಝ್, ರಾಜ್, ಪ್ರಕಾಶ್ ಉಪಸ್ಥಿತರಿದ್ದರು.

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

4 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

5 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

7 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

7 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

7 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

7 hours ago