ತಿರುನಂತಪುರಂ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್ ಗಾಂಧಿ ವಯನಾಡಿನಿಂದಲೇ ಸ್ಪರ್ಧೆ ಮಾಡಲಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ವಯಾನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ ಸಾಧಿಸಿದ್ದರು. ಇದೇ ಸಮಯಕ್ಕೆ ವಯನಾಡಿನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ 10,92,197 ಮತಗಳನ್ನು ಪಡೆದುಕೊಂಡಿದ್ದರು. ಈ ಮೂಲಕ 4,31,770 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕೇರಳದ ಜನತೆ ಮೇಲೆ ವಿಶ್ವಾಸ ಇಟ್ಟಿರುವ ರಾಗಾ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅಲ್ಲದೇ ಕೇರಳದ ಅಲಪ್ಪುಳ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ತಿರುವನಂತಪುರಂನಿಂದ ಡಾ.ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಬಿಜೆಪಿಯ ನಿಷ್ಠಾವಂತ ಕಾರ್ಯರ್ತರಾಗಿದ್ದ ಕೆ. ಸುರೇಂದ್ರನ್ 2020ರಲ್ಲಿ ಕೇರಳ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾದರು. 2019 ರಲ್ಲಿ, ಸುರೇಂದ್ರನ್ ಪತ್ತನಂತಿಟ್ಟದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಯಶಸ್ವಿಯಾಗಲಿಲ್ಲ. 2018ರಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸುರೇಂದ್ರನ್ ಒಂದು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಬಾರಿ ಕೇರಳದಲ್ಲಿ ಬಿಜೆಪಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಅವರನ್ನು ರಾಹುಲ್ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…