Featured

ರಾಹುಲ್ ಹುಟ್ಟುಹಬ್ಬಕ್ಕೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಶುಭ ಕೋರಿದ ಪ್ರಧಾನಿ ಮೋದಿ -Vishwanews24

ನವದೆಹಲಿ, –ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು 49ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರಿಗೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾಗಾಂಧಿ, ಸಹೋದರಿ-ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಎ.ಕೆ.ಆಂಟನಿ, ಎಂ. ಮಲ್ಲಿಕಾರ್ಜುನ ಖರ್ಗೆ,ಎಂ.ವೀರಪ್ಪ ಮೊಯ್ಲಿ, ಮುಖ್ಯಮಂತ್ರಿಗಳಾದ ಅಶೋಕ್‍ಗೆಲ್ಲೋಟ್(ರಾಜಸ್ತಾನ), ಕಮಲ್‍ನಾಥ್(ಮಧ್ಯಪ್ರದೇಶ), ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಶೀಲಾ ದೀಕ್ಷಿತ್ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಜನ್ಮದಿನದ ಶುಭ ಕೋರಿದ್ದಾರೆ.

ಇಂದು ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಕಾರ್ಯಕರ್ತರನ್ನು ಹಾಗೂ ಹಿರಿಯ ನಾಯಕರನ್ನು ದೆಹಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ. ಕಾಂಗ್ರೆಸ್​ ಕಾರ್ಯಕರ್ತರು, ದೇಶಾದ್ಯಂತ ರಾಹುಲ್ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಿಸಲು ನಿರ್ಧರಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago