ನವದೆಹಲಿ, : 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಇನ್ನಿಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.
ಈ ಸಂದರ್ಭದಲ್ಲೇ ನ್ಯಾಯಾಪೀಠವು, ”ಕ್ರಿಮಿನಲ್ ಕಾನೂನುಗಳನ್ನು ಆಡಳಿತರೂಢ ಸರ್ಕಾರ ದುರ್ಬಳಕೆ ಮಾಡದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಹಾಗೆಯೇ ನ್ಯಾಯಾಂಗವು ಈ ಕ್ರಿಮಿನಲ್ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡಲು ಬಳಸಲಾಗಿಲ್ಲ ಎಂಬುದನ್ನು ಖಾತರಿಪಡಿಸಬೇಕು” ಎಂದು ಹೇಳಿದೆ.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ಮುಂಬೈ ಪೊಲೀಸರು ಹಠಾತ್ತನೇ ದಾಳಿ ನಡೆಸಿ ಅರ್ನಬ್‌ನ್ನು ಬಂಧಿಸಿದ್ದರು. ಹಾಗೆಯೇ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಜಾಮೀನು ಅರ್ಜಿ ಕೋರಿ ಅರ್ನಬ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ವಿಚಾರಣೆ ಮುಂದೂಡಿದ ಬಳಿಕ ಸರ್ಕಾರವು ಬಾಂಬೆ ಹೈಕೋರ್ಟ್‌ಗೆ ದೀಪಾವಳಿ ರಜೆ ಘೋಷಿಸಿತ್ತು. ಬಳಿಕ ಮಧ್ಯಂತರ ಜಾಮೀನು ಕೋರಿ ಅರ್ನಬ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ”ನಾವು ಅವರ ಚಾನೆಲ್ ನೋಡಲ್ಲ, ಆದರೆ ಅರ್ನಬ್ ಮೇಲೆ ಸರ್ಕಾರ ಗುರಿ ಮಾಡುವುದು ತಪ್ಪು” ಎಂದು ಹೇಳಿತ್ತು. ಹಾಗೆಯೇ ಜಾಮೀನು ಮಂಜೂರು ಮಾಡಿತ್ತು.
ಇದೀಗ ಶುಕ್ರವಾರ ಈ ಮಧ್ಯಂತರ ಜಾಮೀನನ್ನು ಮುಂದುವರಿಕೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…