Featured

ಅರ್ನಬ್‌ ಗೋಸ್ವಾಮಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಿ : ಸುಪ್ರೀಂ ಕೋರ್ಟ್ -Vishwanews24

ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್‌ ಗೋಸ್ವಾಮಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಿ : ಸುಪ್ರೀಂ ಕೋರ್ಟ್ -Vishwanews24

ನವದೆಹಲಿ,  : 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಇನ್ನಿಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತಿಳಿಸಿದೆ.

ಈ ಸಂದರ್ಭದಲ್ಲೇ ನ್ಯಾಯಾಪೀಠವು, ”ಕ್ರಿಮಿನಲ್‌ ಕಾನೂನುಗಳನ್ನು ಆಡಳಿತರೂಢ ಸರ್ಕಾರ ದುರ್ಬಳಕೆ ಮಾಡದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಹಾಗೆಯೇ ನ್ಯಾಯಾಂಗವು ಈ ಕ್ರಿಮಿನಲ್‌ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡಲು ಬಳಸಲಾಗಿಲ್ಲ ಎಂಬುದನ್ನು ಖಾತರಿಪಡಿಸಬೇಕು” ಎಂದು ಹೇಳಿದೆ.

2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್‌ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ಮುಂಬೈ ಪೊಲೀಸರು ಹಠಾತ್ತನೇ ದಾಳಿ ನಡೆಸಿ ಅರ್ನಬ್‌ನ್ನು ಬಂಧಿಸಿದ್ದರು. ಹಾಗೆಯೇ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಜಾಮೀನು ಅರ್ಜಿ ಕೋರಿ ಅರ್ನಬ್‌ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ವಿಚಾರಣೆ ಮುಂದೂಡಿದ ಬಳಿಕ ಸರ್ಕಾರವು ಬಾಂಬೆ ಹೈಕೋರ್ಟ್‌ಗೆ ದೀಪಾವಳಿ ರಜೆ ಘೋಷಿಸಿತ್ತು. ಬಳಿಕ ಮಧ್ಯಂತರ ಜಾಮೀನು ಕೋರಿ ಅರ್ನಬ್‌ ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ”ನಾವು ಅವರ ಚಾನೆಲ್ ನೋಡಲ್ಲ, ಆದರೆ ಅರ್ನಬ್ ಮೇಲೆ ಸರ್ಕಾರ ಗುರಿ ಮಾಡುವುದು ತಪ್ಪು” ಎಂದು ಹೇಳಿತ್ತು. ಹಾಗೆಯೇ ಜಾಮೀನು ಮಂಜೂರು ಮಾಡಿತ್ತು.

ಇದೀಗ ಶುಕ್ರವಾರ ಈ ಮಧ್ಯಂತರ ಜಾಮೀನನ್ನು ಮುಂದುವರಿಕೆ ಮಾಡಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago