Featured

ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ ; 14 ದಿನಗಳವರೆಗೆ ನ್ಯಾಯಾಂಗ ಬಂಧನ -Vishwanews24

ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ ; 14 ದಿನಗಳವರೆಗೆ ನ್ಯಾಯಾಂಗ ಬಂಧನ -Vishwanews24

ಮುಂಬೈ: ಡ್ರಗ್ಸ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವು ರಿಯಾ ಚಕ್ರವರ್ತಿಯನ್ನು ಸೆಪ್ಟೆಂಬರ್ 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅವರ ವಕೀಲ ಸತೀಶ್ ಮನೇಶಿಂದೆ ಖಚಿತಪಡಿಸಿದ್ದಾರೆ.

ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್ ಸಿ ಬಿ) ರಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಂಗಳವಾರ  ಬಂಧಿಸಿತ್ತು. ಬಳಿಕ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು. ರಿಯಾ ಚಕ್ರವರ್ತಿಯ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಂಗಳವಾರ ಮಧ್ಯಾಹ್ನ, ಪ್ರಕರಣದಲ್ಲಿ ಬಂಧಿತರಾದ ಇತರ ಆರೋಪಿಗಳ ಹೇಳಿಕೆಗಳ ಆಧಾರದ ಮೇಲೆ ಚಕ್ರವರ್ತಿಯನ್ನು ಬಂಧಿಸಲಾಯಿತು. ಇಲ್ಲಿಯವರೆಗೆ, ಎನ್‌ಸಿಬಿ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದೆ. ಏತನ್ಮಧ್ಯೆ  ಜಾಮೀನು ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಟಿ ರಿಯಾ ಡ್ರಗ್ಸ್ ಮಾಫಿಯಾ ಜತೆ ನಂಟು ಹೊಂದಿದ್ದು, ತನ್ನ ಗೆಳೆಯ ಸುಶಾಂತ್ ಸಿಂಗ್ ಗಾಗಿ ಡ್ರಗ್ಸ್ ಸಂಗ್ರಹಿಸಿದ್ದಳು ಎಂದು ಎನ್ ಸಿಬಿ ಆರೋಪಿಸಿದೆ.

ರಿಯಾ ಚಕ್ರವರ್ತಿಯನ್ನು ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯ ಸೆಕ್ಷನ್ 27 ಎ, 21, 22, 29 ಮತ್ತು 28ರ ಅಡಿಯಲ್ಲಿ ಬಂಧಿಸಲಾಗಿದೆ.

Vishwa News 24

Recent Posts

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 minutes ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago