ಮುಂಬೈ: ಡ್ರಗ್ಸ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವು ರಿಯಾ ಚಕ್ರವರ್ತಿಯನ್ನು ಸೆಪ್ಟೆಂಬರ್ 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅವರ ವಕೀಲ ಸತೀಶ್ ಮನೇಶಿಂದೆ ಖಚಿತಪಡಿಸಿದ್ದಾರೆ.
ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್ ಸಿ ಬಿ) ರಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಂಗಳವಾರ ಬಂಧಿಸಿತ್ತು. ಬಳಿಕ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಯಿತು. ರಿಯಾ ಚಕ್ರವರ್ತಿಯ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮಂಗಳವಾರ ಮಧ್ಯಾಹ್ನ, ಪ್ರಕರಣದಲ್ಲಿ ಬಂಧಿತರಾದ ಇತರ ಆರೋಪಿಗಳ ಹೇಳಿಕೆಗಳ ಆಧಾರದ ಮೇಲೆ ಚಕ್ರವರ್ತಿಯನ್ನು ಬಂಧಿಸಲಾಯಿತು. ಇಲ್ಲಿಯವರೆಗೆ, ಎನ್‌ಸಿಬಿ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿದೆ. ಏತನ್ಮಧ್ಯೆ ಜಾಮೀನು ಕೋರಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಟಿ ರಿಯಾ ಡ್ರಗ್ಸ್ ಮಾಫಿಯಾ ಜತೆ ನಂಟು ಹೊಂದಿದ್ದು, ತನ್ನ ಗೆಳೆಯ ಸುಶಾಂತ್ ಸಿಂಗ್ ಗಾಗಿ ಡ್ರಗ್ಸ್ ಸಂಗ್ರಹಿಸಿದ್ದಳು ಎಂದು ಎನ್ ಸಿಬಿ ಆರೋಪಿಸಿದೆ.
ರಿಯಾ ಚಕ್ರವರ್ತಿಯನ್ನು ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಕಾಯ್ದೆಯ ಸೆಕ್ಷನ್ 27 ಎ, 21, 22, 29 ಮತ್ತು 28ರ ಅಡಿಯಲ್ಲಿ ಬಂಧಿಸಲಾಗಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…