Featured

ರೀಲ್ಸ್ ಮಾಡಲು ಹೋಗಿ 300 ಅಡಿ ಆಳದ ಕಮರಿಗೆ ಬಿದ್ದು ಯುವತಿ ದಾರುಣ ಸಾವು – vishwanews24

ರೀಲ್ಸ್ ಮಾಡಲು ಹೋಗಿ 300 ಅಡಿ ಆಳದ ಕಮರಿಗೆ ಬಿದ್ದು ಯುವತಿ ದಾರುಣ ಸಾವು

ರಾಯಗಢ: ಮಹಾರಾಷ್ಟ್ರದ ರಾಯಗಢ ಬಳಿಯ ಕುಂಭೆ ಜಲಪಾತದಲ್ಲಿ ವಿಡಿಯೊ ಮಾಡುತ್ತಿದ್ದ 26 ವರ್ಷದ ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಬೈ ನಿವಾಸಿ ಅನ್ವಿ ಕಾಮ್ದಾರ್ ರೀಲ್ ಮಾಡುತ್ತಾ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನ್ವಿ ಜುಲೈ 16 ರಂದು ಏಳು ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು.  ಬೆಳಿಗ್ಗೆ 10.30ಕ್ಕೆ ವಿಡಿಯೊ ಮಾಡುವಾಗ ಅನ್ವಿ ಆಳವಾದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದರು ಮತ್ತು ರಕ್ಷಣಾ ತಂಡವು ಘಟನಾ ಸ್ಥಳಕ್ಕೆ ನೀಡಿ ಯುವತಿಯ ಪತ್ತೆಗಾಗಿ ಶ್ರಮವಹಿಸುತ್ತಿದೆ. ನಾವು ಸ್ಥಳಕ್ಕೆ ತಲುಪಿದ ಕೂಡಲೇ, ಯುವತಿ ಸುಮಾರು 300ರಿಂದ 350 ಅಡಿ ಕೆಳಗೆ ಬಿದ್ದಿದ್ದಾಳೆ ಎಂಬದು ಗೊತ್ತಾಯಿತು. ಅವರು ಗಂಭೀರ ಗಾಯಗೊಂಡಿದ್ದರಿಂದ ಮತ್ತು ಭಾರಿ ಮಳೆಯಾಗುತ್ತಿದ್ದ ಕಾರಣ ಅವಳನ್ನು ಮೇಲಕ್ಕೆತ್ತುವುದು ಕಷ್ಟಕರವಾಗಿತ್ತು. ಬಳಿಕ ಸರಪಳಿಯ ಮೂಲಕ ಅವರನ್ನು ಹೊರತೆಗೆದೆವು ಎಂದು ಅಧಿಕಾರಿಗಳು ಹೊರಟ್ಟಿದ್ದಾರೆ.

ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ, ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ತೀವ್ರ ಗಾಯಗಳಿಂದಾಗಿ ಮನಗಾಂವ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಪ್ರವಾಸೋದ್ಯಮವನ್ನು ಜವಾಬ್ದಾರಿಯುತವಾಗಿ ಆನಂದಿಸಬೇಕು ಮತ್ತು ಸಹ್ಯಾದ್ರಿ ಶ್ರೇಣಿಗಳ ರಮಣೀಯ ಸೌಂದರ್ಯವನ್ನು ಅನ್ವೇಷಿಸುವಾಗ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago