ಬೆಂಗಳೂರು,: “ಹೊಸ ರೀತಿಯ ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ಕರ್ಫ್ಯೂ ಜಾರಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, “ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ. ಕಾಟಾಚಾರದ ರಾತ್ರಿ ಕರ್ಪ್ಯೂ ಹೇರಿ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ?.ವಿವೇಕಯುತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವೇ ಇದು?. ಈ ಸರ್ಕಾರಕ್ಕೇ ಅರಳು ಮರಳೋ?.ಅಥವಾ ಸರ್ಕಾರ ನಡೆಸುವವರಿಗೆ ಅರಳು ಮರಳೋ?.ಅರ್ಥವಾಗುತ್ತಿಲ್ಲ” ಎಂದಿದ್ದಾರೆ.
“ಕರ್ನಾಟಕ ರಾಜ್ಯದಲ್ಲಿ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
”ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…