ರಾಮನಗರ: ಜಿಪ್ ಲೈನ್ ಆಡಲು ಹೋಗಿ ಮಹಿಳೆ ಸಾವನ್ನಪ್ಪಿ, ವ್ಯಕ್ತಿಯೊಬ್ಬ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಬಳಿಯ resort ನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ನಿವಾಸಿ ರಂಜಿನಿ (35) ಮೃತರು. ಗಾಯಾಳು ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ರಂಜಿನಿ ಅವರು ಜೆಪಿ ನಗರದ ಮಿಲನ ನರ್ಸಿಂಗ್ ಹೋಂನಲ್ಲಿಕಾರ್ಯ ನಿರ್ವಹಿಸುತ್ತಿದ್ದು, ಸ್ನೇಹಿತರ ಜತೆ ರಂಜಿನಿ ಒಂದು ರಜಾ ದಿನ ಕಳೆಯಲು ಹಾರೋಹಳ್ಳಿ ಬಳಿಯ ರೆಸಾರ್ಟ್‌ಗೆ ಬಂದಿದ್ದರು. ಈ ವೇಳೆ ಜಿಪ್‌ಲೈನ್ ಆಡುತ್ತಿದ್ದಾಗ ಅದು ಕಟ್ ಆಗಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಜೊತೆಯಲ್ಲಿದ್ದ ವ್ಯಕ್ತಿ ಗಾಯಗೊಂಡಿದ್ದಾನೆ.
ರೆಸಾರ್ಟ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ರಂಜಿನಿ ಸಂಬಂಧಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾರೋಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೆಸಾರ್ಟ್ ಮಾಲೀಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಕ್ರೀಡಾ ಸುರಕ್ಷತಾ ನಿಯಮ ಪಾಲಿಸದ ಕಾರಣ ಈ ಘಟನೆ ನಡೆದಿದೆ ಎಂದು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಾರೋಹಳ್ಳಿ ಪೊಲೀಸ್ ಠಾಣೆಗೆ ನಿರ್ಮಲ ಎಂಬುವರು ದೂರು ನೀಡಿದ್ದಾರೆ. ಹಾರೋಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…