Featured

ರೇಖಾ ಕದಿರೇಶ್‌ ಹತ್ಯೆ ಪ್ರಕರಣ : ಕದಿರೇಶ್ ಸಹೋದರಿ ಮಾಲಾ, ಆಕೆಯ ಪುತ್ರನ ಸೆರೆ -Vishwanews24

ರೇಖಾ ಕದಿರೇಶ್‌ ಹತ್ಯೆ ಪ್ರಕರಣ : ಕದಿರೇಶ್ ಸಹೋದರಿ ಮಾಲಾ, ಆಕೆಯ ಪುತ್ರನ ಸೆರೆ -Vishwanews24

ಬೆಂಗಳೂರು: ಛಲವಾದಿಪಾಳ್ಯದ ಮಾಜಿ ಕಾರ್ಪೋರೇಟರ್‌ ರೇಖಾ ಕದಿರೇಶ್‌ ಹತ್ಯೆ ಪ್ರಕರಣದ ಕಿಂಗ್‌ಪಿನ್‌ಗಳಾದ ಕದಿರೇಶ್‌ ಸಹೋದರಿ ಮಾಲಾ ಮತ್ತು ಆಕೆಯ ಪುತ್ರ ಅರುಳ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಮಧ್ಯೆ ಪ್ರಕರಣದ ಮಾಸ್ಟರ್‌ ಮೈಂಡ್‌ “ಕ್ಯಾಪ್ಟಲ್‌ ಅಲಿಯಾಸ್‌ ಸೆಂಥಿಲ್‌ ‘ಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಮಾಲಾ, ಆಕೆಯ ಪುತ್ರ ಅರುಳ್‌ ಪಾತ್ರ ಬಹುತೇಕ ಸಾಬೀತಾಗಿದ್ದು, ಸೂಕ್ತ ಸಾಕ್ಷಾಧಾರಗಳು ಸಿಕ್ಕಿವೆ. ಹಣಕಾಸು ಮತ್ತು ರಾಜಕೀಯ ಕಾರಣಕ್ಕಾಗಿ ಪೀಟರ್‌ ಮತ್ತು ಆತನ ಸಹಚರರನ್ನುಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ.

ಮುಂಬರುವ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ರೇಖಾ ಕದಿರೇಶ್‌ ಸಿದ್ಧವಾಗಿದ್ದರು. ಬಿಜೆಪಿಯಿಂದ ಟಿಕೆಟ್‌ ಕೂಡ ಖಚಿತವಾಗಿತ್ತು. ಆದರೆ, ಕದಿರೇಶ್‌ ಸಹೋದರಿ ಮಾಲಾ, ಬಿಎಸ್‌ಪಿಯಿಂದ ಚುನಾವಣೆ ಸ್ಪರ್ಧಿಸಲು ಮುಂದಾಗಿದ್ದಳು. ಒಂದು ತನಗೆ ಟಿಕೆಟ್‌ ಸಿಗದಿದ್ದರೆ, ಪುತ್ರಿ ಕಸ್ತೂರಿ ಅಥವಾ ಅರುಳ್‌ ಪತ್ನಿ ಪೂರ್ಣಿಮಾಳನ್ನು ಚುನಾವಣೆಗೆ ನಿಲ್ಲಿಸಲು ಸಿದ್ಧತೆ ನಡೆಸಿದ್ದಳು. ಆದರೆ, ದಿನೇ ದಿನೆ ವಾರ್ಡ್‌ನಲ್ಲಿ ರೇಖಾ ಜನಪ್ರಿಯತೆ, ವರ್ಚಸ್ಸು ಹೆಚ್ಚಾಗುತ್ತಿತ್ತು. ಜತೆಗೆ ಲಾಕ್‌ಡೌನ್‌ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಗಳಲ್ಲೂ ರೇಖಾ ಮನ್ನಣೆ ಪಡೆದುಕೊಂಡಿದ್ದರು. ಹೀಗಾಗಿ ತನ್ನ ಹಾಗೂ ತನ್ನ ಕುಟುಂಬದ ಭವಿಷ್ಯಕ್ಕೆ ರೇಖಾ ಅಡಿಯಾಗುತ್ತಿದ್ದಾಳೆ ಎಂದು ನಿಶ್ಚಯಿಸಿದ್ದ ಮಾಲಾ, ಪುತ್ರ ಅರುಳ್‌ ಜತೆ ಸೇರಿಕೊಂಡು ರೇಖಾ ಹತ್ಯೆಗೆ ಮೂರು ತಿಂಗಳ ಹಿಂದೆಯೇ ಸಿದ್ಧತೆ ನಡೆಸಿದ್ದರು.

ಹಂತಕರ ಸಂಪರ್ಕ: ಸುಮಾರು 25 ವರ್ಷಗಳ ಹಿಂದೆ ಕಳ್ಳಭಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದ ಮಾಲಾ, ಸಾರಾಯಿ ನಿಷೇಧಿಸುತ್ತಿದ್ದಂತೆ ಗಾಂಜಾ ದಂಧೆ ನಡೆಸುತ್ತಿದ್ದಳು. ಹೀಗಾಗಿ ಒಂದೆರಡು ಬಾರಿ ತನ್ನ ಹಳೇ ಸಂಪರ್ಕದಲ್ಲಿದ್ದ ನಗರದ ಕೆಲ ರೌಡಿಗಳು, ಜತೆಗೆ ಕದಿರೇಶ್‌ ಹತ್ಯೆಗೈದ ಶೋಭನ್‌ ಗ್ಯಾಂಗ್‌ ನ ಕೆಲ ರೌಡಿಗಳು, ಸುಪಾರಿ ಹಂತಕರನ್ನು ಸಂಪರ್ಕಿಸಿದ್ದಳು ಎಂದು ಹೇಳಲಾಗಿದೆ. ಆದರೆ, ಅವರು ಯಾರು ಒಪ್ಪಿಕೊಂಡಿರಲಿಲ್ಲ. ಮತ್ತೂಂದೆಡೆ ಪೀಟರ್‌ ಇರುವವರೆಗೂ ರೇಖಾ ಹತ್ಯೆ ಸಾಧ್ಯವಿಲ್ಲ ಎಂದ ಮಾಲಾ ಅಂದುಕೊಂಡಿದ್ದಳು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

16 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

17 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

17 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

21 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

22 hours ago