ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ – vishwanews24
ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ
ಚಿತ್ರದುರ್ಗ: ಬೆಂಗಳೂರಿನಲ್ಲಿ ಭೀಕರವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಾಂಕೇತಿಕವಾಗಿ 5 ಲಕ್ಷ ರೂ. ಪರಿಹಾರ ನೀಡಿದೆ.
ಶನಿವಾರ ಮೃತ ರೇಣುಕಸ್ವಾಮಿ ಮನೆಗೆ ಭೇಟಿ ನೀಡಿದ ಮಂಡಳಿ ಪದಾಧಿಕಾರಿಗಳು, ಕಲಾವಿದರು ಪಾಲಕರಿಗೆ, ಪತ್ನಿಗೆ ಪ್ರತ್ಯೇಕವಾಗಿ ತಲಾ 2.5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಸಾಂತ್ವಾನ ಹೇಳಿದರು.
ವಾಹನ ಸವಾರಿಗೆ ಶಾಕ್ : ಪೆಟ್ರೋಲ್, ಡೀಸೆಲ್ ದರ ಏರಿಕೆ – vishwanews24
ಸುದ್ದಿಗಾರರೊಂದಿಗೆ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ, ಇದು ಸಾಂಕೇತಿಕವಷ್ಟೇ. ಶಾಶ್ವತ ಪರಿಹಾರಕ್ಕೂ ನಿರ್ಧಾರ ಕೈಗೊಳ್ಳಲಾಗುವುದು. ನಿರಂತರವಾಗಿ ಕುಟುಂಬದ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುತ್ತೇವೆ ಎಂದು ಭರವಸೆ ನೀಡಿದರು.
