ರೇಣುಕಸ್ವಾಮಿ ಕೊಲೆ ಪ್ರಕರಣ : ಪವಿತ್ರ  ಗೌಡ ಜೈಲು ಪಾಲು ,ದರ್ಶನ್‌ ಪೊಲೀಸ್‌ ಕಸ್ಟಡಿಗೆ – vishwanews24

Featured, ರಾಜ್ಯ ನ್ಯೂಸ್

ರೇಣುಕಸ್ವಾಮಿ ಕೊಲೆ ಪ್ರಕರಣ : ಪವಿತ್ರ  ಗೌಡ ಜೈಲು ಪಾಲು ; ಇವತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ  ಗೌಡ ಅವರು ಜೈಲು ಪಾಲಾಗಿದ್ದರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ  ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ  ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್ : ದರ್ಶನ್ ಗ್ಯಾಂಗ್​ನ ಪೊಲೀಸ್‌ ಕಸ್ಟಡಿ ಅವಧಿ ಇಂದು ಮುಕ್ತಾಯ – ನ್ಯಾಯಾಲಯಕ್ಕೆ ಹಾಜರುಪಡಿಸಲಿರೋ ಪೊಲೀಸರು – vishwanews24

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪವಿದ್ದು ಅವರನ್ನು ಕಳೆದ ಜೂನ್ 11ರಂದು ಅರೆಸ್ಟ್ ಮಾಡಲಾಗಿತ್ತು.

Leave a Reply