ದಾವಣಗೆರೆ: ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಕೊನೆಗೂ ಫೈನಲ್ ಟಚ್ ಪಡೆದುಕೊಂಡಿದೆ.
ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಕೊನೆಗೂ ಅಂತ್ಯಕಂಡಿದೆ.
ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ.
ಕಳೆದ ನವೆಂಬರ್ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.
ಎಫ್‌ಎಸ್‌ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…