ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.
ದರ್ಶನ್ ಹೈಕೋರ್ಟ್‌ಗೆ ಕಾರಣವನ್ನು ಕೊಟ್ಟಿದ್ದಾರೆ. ವೃತ್ತಿಯಲ್ಲಿ ನಾನೊಬ್ಬ ನಟ ಹಾಗೂ ಮೈಸೂರಿನ ಖಾಯಂ ನಿವಾಸಿ. ವೃತ್ತಿಪರ ಕಾರಣಗಳು ಹಾಗೂ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಹೊರಗೆ ಹೋಗುವುದು ಯಾವಾಗಲೂ ಅವಶ್ಯವಿರುತ್ತದೆ. ಆದರೆ, ಈ ಕೋರ್ಟ್ ವಿಚಾರಣಾ ನ್ಯಾಯಲಯದ ವ್ಯಾಪ್ತಿ ಬಿಡದಂತೆ ಷರತ್ತು ವಿಧಿಸಿದೆ. ಇದರಿಂದಾಗಿ ವಿಚಾರಣಾ ನ್ಯಾಯಾಲಯದಲ್ಲಿ ಪ್ರತಿ ಬಾರಿ ಅನುಮತಿ ಪಡೆಯುವುದು ಕಠಿಣವಾಗಿದೆ. ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂದು ನಟ ದರ್ಶನ್ ಕೆಲವು ಅಂಶಗಳನ್ನ ನ್ಯಾಯಾಲಯದ ಮುಂದಿಟ್ಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…