ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್‌ಪಿಪಿ ಮತ್ತು ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.
ನಟ ದರ್ಶನ್ ಅಂಡ್ ಗ್ಯಾಂಗ್‌ನ ಸದಸ್ಯರಾದ ಪವನ್, ರಾಘವೇಂದ್ರ, ನಂದೀಶ್, ವಿನಯ್ ಹಾಗೂ ಧನರಾಜ್ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಆರೋಪಿಗಳು ಹೊರಬಂದಲ್ಲಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ವಾದಿಸಲಾಗಿತ್ತು. ಆದರೆ, ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿ ರಾಚಯ್ಯ ಅವರಿದ್ದ ಏಕಸದಸ್ಯ ಪೀಠವು, ಇಂದು ಪ್ರಾಸಿಕ್ಯೂಷನ್ ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿಗಳ ಜಾಮೀನನ್ನು ಎತ್ತಿ ಹಿಡಿದಿದೆ.
ಆರೋಪಿಗಳಾದ ರಾಘವೇಂದ್ರ, ಧನರಾಜ್ ಹಾಗೂ ವಿನಯ್ ಪರವಾಗಿ ಹಿರಿಯ ವಕೀಲ ರಂಗನಾಥ ರೆಡ್ಡಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖೆ ಈಗಾಗಲೇ ಪೂರ್ಣಗೊಂಡು ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಇಂತಹ ಹಂತದಲ್ಲಿ ಜಾಮೀನು ರದ್ದುಗೊಳಿಸಲು ಬಲವಾದ ಕಾರಣಗಳಿಲ್ಲ ಎಂದು ಪ್ರತಿಪಾದಿಸಿದ್ದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು, ಇಂದು ಅಂತಿಮ ತೀರ್ಪು ಪ್ರಕಟಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಿದ್ದರು. ಈ ಪೈಕಿ ಕೆಲವರಿಗೆ ಜಾಮೀನು ಲಭ್ಯವಾಗಿತ್ತು. ಪ್ರಾಸಿಕ್ಯೂಷನ್ ದರ್ಶನ್ ಸೇರಿದಂತೆ ಒಟ್ಟು 7 ಮಂದಿ ಆರೋಪಿಗಳ ಜಾಮೀನು ರದ್ದತಿಗೆ ಹೈಕೋರ್ಟ್ ಮೊರೆ ಹೋಗಿತ್ತು. ಈಗ ಐವರು ಆರೋಪಿಗಳಿಗೆ ಹೈಕೋರ್ಟ್‌ನಲ್ಲಿ ಜಯ ಸಿಕ್ಕಂತಾಗಿದ್ದು, ತನಿಖಾ ಸಂಸ್ಥೆಗೆ ಕಾನೂನಾತ್ಮಕವಾಗಿ ಹಿನ್ನಡೆಯಾದಂತಾಗಿದೆ. ಈ ಆದೇಶದಿಂದಾಗಿ ಸದ್ಯ ಜಾಮೀನಿನ ಮೇಲೆ ಹೊರಗಿರುವ ಈ ಐವರು ಆರೋಪಿಗಳು ನಿರಾಳವಾಗಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…