ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಗೆ ಜು. 4 ರವರೆಗೆ ನ್ಯಾಯಾಂಗ ಬಂಧನ – vishwanews24
ಕೊಲೆ ಕೇಸ್ ನಲ್ಲಿ ನಟ ದರ್ಶನ್ ಗೆ ಜೈಲು
ರೇಣುಕಾಸ್ವಾಮಿ ಕಿಡ್ನಾಪ್ & ಕೊಲೆ ಕೇಸ್- ಜು. 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆಯ ನಂತ್ರ ಎ.1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಮಂಗಳೂರು: ಅಮಾಯಕರನ್ನು ಆರೋಪಿಗಳನ್ನಾಗಿಸಿ , ನೈಜ ಆರೋಪಿಗಳ ರಕ್ಷಣೆ: ಸೌಜನ್ಯ ಹೋರಾಟ ಸಮಿತಿ ಆರೋಪ – vishwanews24
