ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್ ಅವರು ಗುರುವಾರ(ಜು.18ರಂದು) ಆದೇಶ ನೀಡಿದ್ದಾರೆ.
ಆ ಮೂಲಕ ದರ್ಶನ್ & ಗ್ಯಾಂಗ್ ಆಗಸ್ಟ್ 1ರವರೆಗೆ ಮತ್ತೆ ಜೈಲಿನಲ್ಲಿ ದಿನ ಕಳೆಯಲಿದ್ದಾರೆ. ದರ್ಶನ್, ಪವಿತ್ರಾ ಗೌ ಡ ಸೇರಿ 17 ಮಂದಿಯನ್ನು ಗುರುವಾರ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇನ್ನು ದರ್ಶನ್ ಅವರಿಗೆ ಜೈಲೂಟ ಸೇವಿಸಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ತಮಗೆ ಮನೆಯೂಟ ಬೇಕು. ಮಲಗಲು ಹಾಸಿಗೆ ಬೇಕು, ಓದಲು ಪುಸ್ತಕಗಳನ್ನು ನೀಡಬೇಕೆಂದು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲು ಅಧಿಕಾರಿಗಳು, ಸರ್ಕಾರಕ್ಕೆ ನೊಟೀಸ್ ನೀಡಿ, ವಿಚಾರಣೆಯನ್ನು ಶುಕ್ರವಾರ (ಜು.19ಕ್ಕೆ) ಅಂದರೆ ನಾಳೆಗೆ ಮುಂದೂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…