ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ.
ಆರೋಪಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ವಿರುದ್ಧ 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯ ಮುದ್ರಿತ ಪ್ರತಿಯನ್ನು ತನಿಖಾ ತಂಡವು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾಧಾರಗಳ ಹೇಳಿಕೆಯ ಸಹಿತ ಇದುವರೆಗಿನ ತನಿಖಾ ಮಾಹಿತಿಯನ್ನು ದೋಷಾರೋಪ ಪಟ್ಟಿ ಒಳಗೊಂಡಿದೆ ಎಂದು ತಿಳಿದುಬಂದಿದೆ.
ದರ್ಶನ್ 2ನೇ ಆರೋಪಿ: ಎಫ್ ಐಆರ್ ನಲ್ಲಿ ಇರುವಂತೆಯೇ ಚಾರ್ಜ್ ಶೀಟ್ ನಲ್ಲೂ ನಟ ದರ್ಶನ್ ಅವರನ್ನು ಎರಡನೇ ಆರೋಪಿ ಎಂದೇ ಉಲ್ಲೇಖಿಸಲಾಗಿದೆ. ಪವಿತ್ರಾ ಗೌಡ ಮೊದಲ ಆರೋಪಿಯಾಗಿಯೇ ಉಳಿದಿದ್ದಾರೆ. ಉಳಿದ ಹದಿನೈದು ಆರೋಪಿಗಳ ಪಾತ್ರವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ತನಿಖೆ ಇನ್ನೂ ಬಾಕಿಯಿದ್ದು, ಇದು ಪ್ರಾಥಮಿಕ ದೋಷಾರೋಪ ಪಟ್ಟಿ. ತನಿಖೆ ಪೂರ್ಣಗೊಂಡ ಬಳಿಕ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…