Featured

ರೇಣುಕಾಸ್ವಾಮಿ ಕೊಲೆ ಪ್ರಕರಣ : ಮೂವರಿಗೆ ಜಾಮೀನು ಮಂಜೂರು – ದರ್ಶನ್, ಪವಿತ್ರಾ ಅರ್ಜಿ ವಿಚಾರಣೆ ಮುಂದೂಡಿಕೆ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಮೊದಲ ಬಾರಿ ಮೂವರು ಆರೋಪಿಗೆ ಜಾಮೀನು ಮಂಜೂರು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್​ ಅವರ ಜಾಮೀನು ಅರ್ಜಿ ವಿಚಾರಣೆ ಕ್ರಮವಾಗಿ ಸೆಪ್ಟೆಂಬರ್​ 25 ಮತ್ತು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆಯಾಗಿದೆ.

ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಇಂದು ಆದೇಶ ನೀಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನ ತನಿಖೆ ಅಂತ್ಯವಾಗಿ ಇತ್ತೀಚೆಗೆ ಪೊಲೀಸರು ಚಾರ್ಜ್​ಶೀಟ್​ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಎ15, 16 ಮತ್ತು ಎ 17 ಆರೋಪಿಗಳಿಗೆ ಜಾಮೀನು: ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದ್ದು, ಮೂವರಿಗೆ ಇಂದು ಜಾಮೀನು ಸಿಕ್ಕಿದೆ. ಎ15 ಆರೋಪಿ ನಿಖಿಲ್ ನಾಯ್ಕ್, ಎ16 ಆರೋಪಿಯಾಗಿದ್ದ ಕೇಶವಮೂರ್ತಿ ಹಾಗೂ ಎ17 ಆರೋಪಿ ಕಾರ್ತಿಕ್ ಗೆ ಹೈಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ರೇಣುಕಾಸ್ವಾಮಿ ಹತ್ಯೆ ಕೇಸಿನಲ್ಲಿ ಪ್ರಮುಖ ಆರೋಪಿಗಳಿಂದ ಹಣದ ಆಮಿಷಕ್ಕೆ ಒಳಗಾಗಿ ಶವ ಸಾಗಿಸುವಾಗ, ಪೊಲೀಸರಿಗೆ ಶರಣಾಗುವಲ್ಲಿ ಮಾತ್ರ ಇವರ ಪಾತ್ರವಿತ್ತು, ಹತ್ಯೆಗೂ ಇವರಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಹೇಳಲಾಗಿತ್ತು.

ರೇಣುಕಾಸ್ವಾಮಿ ಶವ ಸಿಕ್ಕಿದ ಮರುದಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಇವರು ಬಂದು ಅಂದರೆ ಜೂನ್ 10ಕ್ಕೆ ಶರಣಾಗಿದ್ದರು. ನಾವೇ ಕೊಲೆ ಮಾಡಿದ್ದಾಗಿ ಆರಂಭದಲ್ಲಿ ಹೇಳಿದ್ದರು. ಕೊನೆಗೆ ಪೊಲೀಸರು ಅವರ ಬಾಯಿ ಬಿಡಿಸಿದಾಗ ಸತ್ಯ ಹೊರಬಂದಿತ್ತು ಎಂದು ಹೇಳಲಾಗುತ್ತಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

17 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

17 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

18 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

18 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

19 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

20 hours ago