ರೇಣುಕಾಸ್ವಾಮಿ ಕೊಲೆ ಪ್ರಕರಣ : ಮೊದಲ ಬಾರಿ ಮೂವರು ಆರೋಪಿಗೆ ಜಾಮೀನು ಮಂಜೂರು
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಕ್ರಮವಾಗಿ ಸೆಪ್ಟೆಂಬರ್ 25 ಮತ್ತು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆಯಾಗಿದೆ.
ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಇಂದು ಆದೇಶ ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನ ತನಿಖೆ ಅಂತ್ಯವಾಗಿ ಇತ್ತೀಚೆಗೆ ಪೊಲೀಸರು ಚಾರ್ಜ್ಶೀಟ್ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಎ15, 16 ಮತ್ತು ಎ 17 ಆರೋಪಿಗಳಿಗೆ ಜಾಮೀನು: ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದ್ದು, ಮೂವರಿಗೆ ಇಂದು ಜಾಮೀನು ಸಿಕ್ಕಿದೆ. ಎ15 ಆರೋಪಿ ನಿಖಿಲ್ ನಾಯ್ಕ್, ಎ16 ಆರೋಪಿಯಾಗಿದ್ದ ಕೇಶವಮೂರ್ತಿ ಹಾಗೂ ಎ17 ಆರೋಪಿ ಕಾರ್ತಿಕ್ ಗೆ ಹೈಕೋರ್ಟ್ ನಿಂದ ಜಾಮೀನು ಸಿಕ್ಕಿದೆ.
ರೇಣುಕಾಸ್ವಾಮಿ ಹತ್ಯೆ ಕೇಸಿನಲ್ಲಿ ಪ್ರಮುಖ ಆರೋಪಿಗಳಿಂದ ಹಣದ ಆಮಿಷಕ್ಕೆ ಒಳಗಾಗಿ ಶವ ಸಾಗಿಸುವಾಗ, ಪೊಲೀಸರಿಗೆ ಶರಣಾಗುವಲ್ಲಿ ಮಾತ್ರ ಇವರ ಪಾತ್ರವಿತ್ತು, ಹತ್ಯೆಗೂ ಇವರಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಹೇಳಲಾಗಿತ್ತು.
ರೇಣುಕಾಸ್ವಾಮಿ ಶವ ಸಿಕ್ಕಿದ ಮರುದಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಇವರು ಬಂದು ಅಂದರೆ ಜೂನ್ 10ಕ್ಕೆ ಶರಣಾಗಿದ್ದರು. ನಾವೇ ಕೊಲೆ ಮಾಡಿದ್ದಾಗಿ ಆರಂಭದಲ್ಲಿ ಹೇಳಿದ್ದರು. ಕೊನೆಗೆ ಪೊಲೀಸರು ಅವರ ಬಾಯಿ ಬಿಡಿಸಿದಾಗ ಸತ್ಯ ಹೊರಬಂದಿತ್ತು ಎಂದು ಹೇಳಲಾಗುತ್ತಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…