ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಅ. 5ಕ್ಕೆ ಮುಂದೂಡಿಕೆ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಅ. 5ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗೌಡರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿ ಸಿಸಿಹೆಚ್ 57ನೇ ನ್ಯಾಯಾಲಯವು ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಆರೋಪಿಗಳಾದ ಎ2 ದರ್ಶನ್ ಹಾಗೂ ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯು 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು. ಇದೇ ವೇಳೆ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನೂ ಕೋರ್ಟ್ ಮುಂದೂಡಿತು. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು.
