ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಇದರ ಬೆನ್ನಲೇ, ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸ್ಯಾಂಡಲ್ವುಡ್ ಕ್ವೀನ್ ಖ್ಯಾತಿಯ ರಮ್ಯಾ, ಮೃತ ರೇಣುಕಾಸ್ವಾಮಿ ಸಾವಿಗೆ ನ್ಯಾಯ ಸಿಗಲಿದೆ ಎಂದು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ”ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣ – ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ” ಎಂದು ಬರೆದುಕೊಂಡಿದ್ದಾರೆ.
2024ರಲ್ಲಿ ನಟ ದರ್ಶನ್ ಸೇರಿ ಹಲವು ಜನಪ್ರಿಯ ವ್ಯಕ್ತಿಗಳ ವಿರುದ್ಧ ಕೆಲ ಆರೋಪಗಳು ಕೇಳಿಬಂದಿದ್ದವು. ಆ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನೀವು ಹೋಗಿ ಜನರಿಗೆ ಹೊಡೆದು ಅವರನ್ನು ಸಾಯಿಸಲು ಆಗುವುದಿಲ್ಲ. ಕಾನೂನಿನ ಮೂಲಕ ಹೋಗಬೇಕಿದೆ. ಪೊಲೀಸ್ ಅಧಿಕಾರಿಗಳ ಮೇಲೆ ಅಪಾರ ಗೌರವ ಹೊಂದಿದ್ದೇನೆ. ಜನರು ಕಾನೂನಿನ ಮೇಲೆ ಇಟ್ಟಿರುವ ನಂಬಿಕೆಯನ್ನು ಪೊಲೀಸರು ಉಳಿಸುತ್ತಾರೆಂದು ನಂಬಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…