ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು : ಪೊಲೀಸ್ ಆಯುಕ್ತ ಬಿ. ದಯಾನಂದ್ – vishwanews24
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು : ಪೊಲೀಸ್ ಆಯುಕ್ತ ಬಿ. ದಯಾನಂದ್
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಕೂಲಂಕಷವಾದ ತನಿಖೆ ಮಾಡಲಾಗುತ್ತಿದೆ. ಬೇರೆ ಬೇರೆ ಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನ ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣದ ಗಂಭಿರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿಗಳನ್ನು ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಇನ್ಸ್ಪೆಕ್ಟರ್ಗಳು ತಂಡದಲ್ಲಿ ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ – vishwanews24
