ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಅವರನ್ನು ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್ ಗಮನಕ್ಕೆ ತಂದರು.
ಈ ಸಂಬಂಧ ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿಯನ್ನು ಹೈಕೋರ್ಟ್ ಕೇಳಿದೆ. ಅಲ್ಲದೆ ಆಕ್ಷೇಪ ಸಲ್ಲಿಸುವಂತೆ ಎಸ್.ಪಿ.ಪಿ. ಪ್ರಸನ್ನಕುಮಾರ್ ರಿಗೆ ಹೈಕೋರ್ಟ್ ಸೂಚಿಸಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…