ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ, ರದ್ದುಗೊಂಡಿರುವ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಕಳೆದ ಆಗಸ್ಟ್ 14ರಂದು ಕೊಲೆ ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಜಾಮೀನು ರದ್ದು ಆದೇಶದಲ್ಲಿ ಕೆಲ ತಪ್ಪುಗಳಿವೆ. ಮತ್ತೊಮ್ಮೆ ಪರಿಶೀಲಿಸಿ ಜಾಮೀನು ನೀಡುವಂತೆ ಪವಿತ್ರಾ ಗೌಡ ಮನವಿ ಮಾಡಿದ್ದರು. ಆದರೆ ನ್ಯಾಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ʼನಾವು ಆದೇಶ ಮತ್ತು ದಾಖಲೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ, ಪುನರ್ ಪರಿಶೀಲನೆಗೆ ಯಾವುದೇ ಪ್ರಕರಣವನ್ನು ಸಲ್ಲಿಸಲಾಗಿಲ್ಲ. ಈ ಹಿನ್ನೆಲೆ ಈ ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆʼ ಎಂದು ಪೀಠ ತಿಳಿಸಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…