ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.
ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:
ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…