ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ.
ಪ್ರದೂಷ್ ಮಾಫಿ ಸಾಕ್ಷಿ ತಡೆಯಲು ದರ್ಶನ್ (Darshan) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮಾಫಿ ಸಾಕ್ಷಿ ದಾಖಲಿಸಲು 59ನೇ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ದರ್ಶನ್‌ಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ:
ಮಾಫಿ ಸಾಕ್ಷಿ ಹೇಳಿಕೆ ದಿನಾಂಕ ನಿಗದಿ ಬೆನ್ನಲ್ಲೇ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದರ್ಶನ್ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಬಗ್ಗೆ ದರ್ಶನ್ ಪರ ವಕೀಲರು, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲು ನಿರ್ಧರಿಸಿದ್ದೇವೆ ಎಂದು ವಿಚಾರಣಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಿರುವುದರಿಂದ ಪ್ರದೂಷ್ ಮಾಫಿ ಸಾಕ್ಷಿ ಹೇಳಿಕೆ ಮುಂದೂಡಲು ಮನವಿ ಮಾಡಿದ್ದು, ಮನವಿಯನ್ನು ನ್ಯಾಯಾಲಯ ತಳ್ಳಿಹಾಕಿದೆ. ಇದಕ್ಕೆ ನ್ಯಾಯಾಲಯ, ಸುಪ್ರೀಂ ಕೋರ್ಟ್ ಟ್ರಯಲ್‌ಗೆ ಟೈಂ ಬಾಂಡ್ ಹಾಕಿದೆ. ಹೀಗಾಗಿ ದಿನಾಂಕ ಮುಂದೂಡಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರಿಗೆ ತಿಳಿಸಿದೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…