ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಪವಿತ್ರಾ ಗೌಡ ವಿನಯ್ ಸೇರಿದಂತೆ ಹಲವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯಗೊಳ್ಳಲಿದೆ.
ಜೂನ್ 11ರಂದು ಆರೋಪಿಗಳನ್ನು ಬಂಧಿಸಲಾಗಿದ್ದು, ಈವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಜೂನ್ 11ರ ಮುಂಜಾನೆ ದರ್ಶನ್ ಅವರನ್ನು ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬಂಧಿಸಲಾಯಿತು. ಆ ಬಳಿಕ ಪವಿತ್ರಾ ಗೌಡ ಸೇರಿ ಹಲವರ ಬಂಧನ ಆಗಿತ್ತು. ಅನುಮಾನ ಇರುವ ಎಲ್ಲರನ್ನೂ ಪೊಲೀಸರು ಬಂಧಿಸಿದರು. 2ನೇ ಬಾರಿಗೆ ಪೊಲೀಸ್ ಕಸ್ಟಡಿ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.
ಈಗಾಗಲೇ ದರ್ಶನ್ ಮತ್ತವರ ಗ್ಯಾಂಗ್‌ನ ಆರೋಪಿಗಳನ್ನ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ. ಸ್ಥಳ ಮಹಜರು ನಡೆಸಿ, ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ, ಸ್ವಇಚ್ಚಾ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಮತ್ತೆ ಡಿ ಗ್ಯಾಂಗ್ ನ ಪೊಲೀಸ್ ಕಸ್ಟಡಿಗೆ ಕೇಳದಿರಲು ತೀರ್ಮಾನಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…