ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು ಅರ್ಜಿ ವಜಾ ಆಗಿದೆ.
ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಎಂಬ ಕಾರಣಗಳನ್ನು ಪವಿತ್ರಾ ಗೌಡ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಆದರೆ ಪವಿತ್ರಾ ಗೌಡ ನೀಡಿರುವ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.
ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು. ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಪವಿತ್ರಾ ಗೌಡ ಅವರು ಇದೀಗ ಹೈಕೋರ್ಟ್ ಮೆಟ್ಟಿಲೇರಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…