ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದಾರೆ.
ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಪತ್ನಿ ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೋರಾಟ ನಡೆಸುತ್ತಿದ್ದರು, ಅಂತಿಮವಾಗಿ ಇಂದು ಪೊಲೀಸರ ಮುಂದೆ ಹೇಳಿಕೆ ನೀಡಲಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ವಿಜಯಲಕ್ಷ್ಮಿ ವಾಸವಿರುವ ಅಪಾರ್ಟ್ಮೆಂಟ್ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಅದೇ ಕಾರಣಕ್ಕೆ ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆದಿದ್ದರು ಎನ್ನಲಾಗುತ್ತಿದೆ.
ದರ್ಶನ್ಗೆ ಬಟ್ಟೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ಸಹ ವಿಜಯಲಕ್ಷ್ಮಿ ತಂದಿದ್ದಾರೆ ಎಂಬ ಮಾಹಿತಿಯೂ ಇದೆ. ದರ್ಶನ್ ಬಂಧನ ಆದಾಗಿನಿಂದಲೂ ವಿಜಯಲಕ್ಷ್ಮಿ ಅವರು ಬೇರೊಬ್ಬರಿಂದ ದರ್ಶನ್ಗೆ ಬೇಕಾದ ಬಟ್ಟೆ ಮತ್ತು ಕೆಲ ಅಗತ್ಯ ವಸ್ತುಗಳನ್ನು ಕಳಿಸುತ್ತಿದ್ದರು ಎನ್ನಲಾಗುತ್ತಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…