ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈಗ ಅವರಿಗೆ ಜಾಮೀನು ಮಂಜೂರಾಗಿದ್ದು, ತಾತ್ಕಾಲಿಕ ನಿರಾಳತೆ ದೊರಕಿದೆ.
ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು. ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…