ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ ಶ್ರೀಲಕ್ಷ್ಮಿ (18) ಎಂದು ಗುರುತಿಸಲಾಗಿದೆ.
ಶ್ರೀಲಕ್ಷ್ಮಿ ಮೇ 30ರ ಬೆಳಗ್ಗೆ ಕಾಲೇಜಿಗೆ ಹೋಗುವಾಗ ಅವರ ಪಕ್ಕದ ಮನೆಯ ನಾಯಿ ಆಕೆಯೆ ಕಚ್ಚಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ಲಸಿಕೆಯನ್ನು ಶ್ರೀಲಕ್ಷ್ಮಿ ಪಡೆದುಕೊಂಡಿದ್ದಳು. ಆದರೆ ಇದರ ನಡುವೆ ಕೆಲವು ದಿನಗಳ ಹಿಂದೆ ಆಕೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀಲಕ್ಷ್ಮಿಯನ್ನು ಖಾಸಗಿ ಆಸ್ಪತ್ರೆಗೆ ಕೊರೆದೊಯ್ಯಲಾಯಿತು.
ಇನ್ನು ಈ ವೇಳೆ ವೈದ್ಯರು ಪರೀಕ್ಷಿಸಿದಾಗ ರೇಬೀಸ್ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದು, ತಕ್ಷಣ ಆಕೆಯನ್ನು ತ್ರಿಸ್ಸೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಸಾವನ್ನಪ್ಪಿದ್ದಾಳೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…