ರೇವಣ್ಣಗೆ ಜಾಮೀನು : ಇದು ಸಂತಸ ಪಡುವ ಸಮಯ ಅಲ್ಲ , ನನಗೆ ಖುಷಿಯಾಗಿಲ್ಲ : ಹೆಚ್ ಡಿಕೆ – Vishwanews24
ರೇವಣ್ಣಗೆ ಜಾಮೀನು : ಇದು ಸಂತಸಪಡುವ ಸಮಯ ಅಲ್ಲ , ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ : ಹೆಚ್ ಡಿಕೆ
ಬೆಂಗಳೂರು: ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಅವರಿಗೆ ಶರತ್ತು ಬದ್ಧ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ ಡಿಕೆ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದಿದ್ದಾರೆ.
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಮಿನಿ ಬಸ್ ; 17 ಮಂದಿಗೆ ಗಾಯ – Vishwanews24
ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ತೆಗೆದುಕೊಂಡಿಲ್ಲ ಎಂದು ಎಸ್ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
