ಮಂಗಳೂರು: ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಮಾಡಲು ಕೊನೆಯ ಅವಕಾಶ ಕಲ್ಪಿಸಲಾಗಿದೆ.
ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುವುದು.ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು, ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರು ತ್ತದೆ. ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕು. ಆದುದರಿಂದ ದ.ಕ. ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣ ಪತ್ರ (ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ.
ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಬೇಕಾಗಿದೆ. ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಮಾಡಲು ಕ್ರಮ ವಹಿಸಲಾಗಿರುತ್ತದೆ.
ಇ-ಕೆವೈಸಿ ಸಂಗ್ರಹಣೆಯನ್ನು ಕರ್ನಾಟಕ ವನ್, ಗ್ರಾಮ ವನ್‌ಗಳಲ್ಲಿ ಕೂಡಾ ಮಾಡಲು ಅವಕಾಶರುತ್ತದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಮತ್ತು ಸಹಾಯಕ ನಿರ್ದೇಶಕರು, ಅನೌಪಚಾರಿಕ ಪಡಿತರ ಪ್ರದೇಶ ಇವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…