ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್
ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ
ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿಗೆ ಅಡಚಣೆ ಉಂಟಾದ ಹಿನ್ನೆಲೆ ಪಡಿತರ ಇ-ಕೆವೈಸಿ ಅವಧಿ ವಿಸ್ತರಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ ಅವಧಿ ವಿಸ್ತರಿಸಿದ ಸರ್ಕಾರ, ನ್ಯಾಯಬೆಲೆ ಅಂಗಡಿಗಳ ಸಮಯದಲ್ಲೂ ಬದಲಾವಣೆ ಮಾಡಿದೆ.
ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ
ರಾಜ್ಯದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಿ ಡೆಡ್ಲೈನ್ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ 30ರೊಳಗೆ ಪಡಿತರ ಚೀಟಿ ಇ-ಕೆವೈಸಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಇದೀಗ ಸದ್ಯ ಗಡುವು ವಿಸ್ತರಣೆ ಮಾಡಿ ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಲಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರೋ ಸರ್ವರ್ ಸಮಸ್ಯೆಗೆ ಜನಸಾಮಾನ್ಯರು ಕಂಗಾಲಾಗಬೇಕಿಲ್ಲ, ಇ-ಕೆವೈಸಿ ಗಡುವನ್ನ ಅಕ್ಟೋಬರ್ 20 ರವರೆಗೆ ವಿಸ್ತರಣೆ ಮಾಡಿರೋದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ
ಇನ್ನು ಬಡವರು, ದಿನಗೂಲಿ ಕಾರ್ಮಿಕರ ಹಿತದೃಷ್ಟಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎರಡು ಮಹತ್ವದ ನಿರ್ಧಾರ ಕೈಗೊಂಡಿದೆ. ಅಕ್ಟೋಬರ್ 1ರಿಂದ ಜಾರಿಯಾಗುವಂತೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಬೆಳಿಗ್ಗೆ 07:00 ರಿಂದ ಮಧ್ಯಾಹ್ನ 12:00 ರವರೆಗೆ ಹಾಗೂ ಸಂಜೆ 04:00 ರಿಂದ ರಾತ್ರಿ 08:00 ರವರೆಗೆ ನ್ಯಾಯಬೆಲೆ ಅಂಗಡಿಗಳು ಓಪನ್ ಇರಬೇಕೆಂದು ಆದೇಶದಲ್ಲಿ ತಿಳಿಸಿದೆ. ದಿನಗೂಲಿ ಕಾರ್ಮಿಕರ ಆದಾಯಕ್ಕೆ ಧಕ್ಕೆಯಾಗದಂತೆ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24
