ರೈತಪರ ಹೋರಾಟದ ವೇಳೆ ರೈತರ ಮೇಲೆ ದಾಖಲಾಗಿರುವ ಎಲ್ಲ ಕೇಸ್ಗಳನ್ನು ವಾಪಸ್ ಪಡೆಯುವುದಾಗಿ ಸಿಎಂ ಭರವಸೆ -Vishwanews24
ಬೆಂಗಳೂರು: ರೈತಪರ ಹೋರಾಟದ ವೇಳೆ ರೈತರ ಮೇಲೆ ದಾಖಲಾಗಿರುವ ಎಲ್ಲ ಕೇಸ್ಗಳನ್ನು ವಾಪಸ್ ಪಡೆಯುವುದಾಗಿ ರೈತರಿಗೆ ಸಿಎಂ ಭರವಸೆ ನೀಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತ್ ಕುಮಾರ್, ರೈತರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯುವಂತೆ ಸಿಎಂ ಗೆ ಮನವಿ ಮಾಡಿದ್ದೇವೆ ಅವರು ಕೇಸ್ ವಾಪಸ್ ಪಡೆಯುವುದಾಗಿ ಭರವಸೆ ಕೊಟ್ಟಿದ್ದಾರೆ.ಅಲ್ಲದೇ ಯಾವ ಯಾವ ಹೋರಾಟದಲ್ಲಿ ಎಷ್ಟೆಷ್ಟು ಪ್ರಕರಣ ದಾಖಲಾಗಿದೆ ಅವುಗಳ ಫೈಲ್ ಗಳನ್ನು ತರಿಸಿಕೊಂಡು ಕ್ಲಿಯರ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಂತ ಹೇಳಿದ್ದಾರೆ ಎನ್ನಲಾಗಿದೆ.
ಅವರು ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ರೈತ ಮುಖಂಡರು ರೈತರ ಮೇಲಿನ ಕೇಸ್ಗಳನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದರು. ಈ ವೇಳೆ ಸಿಎಂ ಬಿ.ಎಸ್. ಯಡಿಯುರಪ್ಪ ಮನವಿಗೆ ಸ್ಪಂದಿಸಿದ್ದು, ರೈತಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕೇಸ್ ವಾಪಸ್ ಪಡೆಯುವ ಕುರಿತು ಅಗತ್ಯ ಕ್ರಮಕ್ಕೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
