Featured

ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ : ಮುಖ್ಯಮಂತ್ರಿ ಎಚ್ಚರಿಕೆ – vishwanews24

ರೈತರ ಬದುಕಿನ ಮೇಲೆ ಚೆಲ್ಲಾಟ ಆಡಿದರೆ ಹುಷಾರ್! ಅಧಿಕಾರಿಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ

* ಬರ ಪರಿಹಾರ 130 ಕೋಟಿ ರೂ. ವಿತರಣೆ

* ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿಳಂಬ, CM ತರಾಟೆ

* ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ..

* 3 ತಿಂಗಳುಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಬಂದ್ ಆಗಬೇಕು

ವಿಜಯನಗರ: ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಕೃಷಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಡೆದ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಆರಂಭಿಸಿದರು.

ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ ಪ್ರಮಾಣ ಎಷ್ಟಿದೆ ಎನ್ನುವ ಕುರಿತಂತೆ ಒಂದೊಂದಾಗಿ ಮಾಹಿತಿ ಪಡೆದು, ಒಮ್ಮೆ ಕೊಟ್ಟ ಬೀಜ ಮೊಳಕೆಯೊಡೆಯದಿದ್ದರೆ ಎರಡನೇ ಸುತ್ತು ಕೂಡ ಬೀಜಗಳನ್ನು ಕಡ್ಡಾಯವಾಗಿ ರೈತರಿಗೆ ವಿತರಿಸಬೇಕು. ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಉಪ ರೈತ ಸಂಪರ್ಕಗಳನ್ನು ಹೆಚ್ಚೆಚ್ಚು ತೆರೆದು ರೈತರಿಗೆ ಬೀಜ, ರಸಗೊಬ್ಬರ ವಿತರಣೆ ಮಾಡಲು ಏನು ಸಮಸ್ಯೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಹಗರಿಬೊಮ್ಮನಹಳ್ಳಿ ಸೇರಿ ನಾನಾ ತಾಲೂಕುಗಳಲ್ಲಿ ಈ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ರಾಜ್ಯ ಸರ್ಕಾರದಿಂದ ನೀಡಿದ ಬರ ಪರಿಹಾರದ ಮೊತ್ತ 130 ಕೋಟಿ ರೂಪಾಯಿ ಸಂಪೂರ್ಣವಾಗಿ ವಿತರಣೆಯಾಗಿದೆ. ಜಿಲ್ಲೆಯಲ್ಲಿ ಯಾವ ಅರ್ಹ ರೈತರಿಗೂ ಬಾಕಿ ಉಳಿಸಿಕೊಂಡಿಲ್ಲ ಎಂದು ಅಧಿಕಾರಿಗಳು ದಾಖಲೆ ಮುಂದಿಟ್ಟು ವಿವರಿಸಿದರು.

ಅತಿ ಹೆಚ್ಚು ಮಳೆಯಿಂದ ಆದ ಹಾನಿ, ನೋಂದಣಿ ಮಾಡಿಕೊಂಡ ಎಲ್ಲಾ ರೈತರಿಗೂ, ಬೆಳೆ ಕಟಾವು ಹೊತ್ತಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಳೆ ವಿಮೆ ವಿತರಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

2023-24 ರಲ್ಲಿ ಒಟ್ಟು 34 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಾಲಿನಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಅಧಿಕಾರಿಗಳ ಮಾಹಿತಿಗೆ ಪ್ರತಿಯಾಗಿ, ಇವರಲ್ಲಿ ಪ್ರತಿಯೊಬ್ಬ ರೈತರ ಕುಟುಂಬಕ್ಕೆ ಪರಿಹಾರ ದೊರಕಿದೆಯೇ ಎಂದು ಪ್ರಶ್ನಿಸಿದರು. ಉಳಿದೆಲ್ಲರಿಗೂ ಸರಿಯಾದ ಸಮಯಕ್ಕೆ ಆತ್ಮಹತ್ಯೆ ಪರಿಹಾರದ 5 ಲಕ್ಷ ಮೊತ್ತ ಜಮೆ ಆಗಿದೆ. ಐದು ಮಂದಿ ರೈತರ ಕುಟುಂಬಕ್ಕೆ ಮಾತ್ರ ತಾಂತ್ರಿಕ ತೊಂದರೆ ಆಗಿದ್ದು ಏಕೆ? ಎಫ್ಎಸ್ಎಲ್ ವರದಿ 20 ದಿನದೊಳಗೆ ಬರುತ್ತದೆ. ಆದರೂ ಪ್ರಕ್ರಿಯೆ ತಡವಾಗಿದ್ದಕ್ಕೆ ಮುಖ್ಯಮಂತ್ರಿಗಳು ಗರಂ ಆಗಿ ತರಾಟೆಗೆ ತೆಗೆದುಕೊಂಡರು. ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್ ಎಂದು ಎಚ್ಚರಿಸಿದರು.

ಕೆರೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು. ಒತ್ತುವರಿಯಿಂದ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಕೊರತೆಯಾಗುತ್ತದೆ. ನರೇಗಾದಲ್ಲಿ ಕೆರೆ ಹೂಳು ತೆಗೆದು ಕೆರೆಗಳಿಗೆ ಮರು ಜೀವ ಒದಗಿಸಬೇಕು ಎಂದು ಸೂಚನೆ ನೀಡಿದರು.

ಮೋಟಾರ್ ಕಳ್ಳರು ಯಾರು ಎನ್ನುವುದು, ಠಾಣಾಧಿಕಾರಿಗಳಿಗೆ ಅವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳು ಗೊತ್ತಿರುತ್ತವೆ. ಆದರೆ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಮಟ್ಕಾ, ಬೆಟ್ಟಿಂಗ್, ಜೂಜು ಹೆಚ್ಚಾಗಿದೆ ಎನ್ನುವ ವರದಿ ಇದೆ. ಇವನ್ನೆಲ್ಲಾ ಸಂಪೂರ್ಣವಾಗಿ ನಿಲ್ಲಿಸಲು ಏಕೆ ಸಾಧ್ಯವಾಗಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪ್ರಶ್ನಿಸಿದರು. ಕೇವಲ ನಿಯಂತ್ರಣ ಸಾಲಲ್ಲ. ಸಂಪೂರ್ಣ ನಿಲ್ಲಿಸಬೇಕು. ಅವರವರ ವ್ಯಾಪ್ತಿಯಲ್ಲಿ ನಡೆಯುವ ಎಲ್ಲಾ ರೀತಿಯ ಕ್ರೈಂಗಳು ಠಾಣಾಧಿಕಾರಿಗಳಿಗೆ ಸಂಪೂಣ ಮಾಹಿತಿ ಇರುತ್ತದೆ. ಆದರೂ ಕ್ರಮ ತೆಗೆದುಕೊಳ್ಳುವುದಿಲ್ಲ. ಮುಂದಿನ ಮೂರು ತಿಂಗಳುಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಬಂದ್ ಆಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಹೊಣೆ ಮಾಡಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಗವಿಯಪ್ಪ, ಗಣೇಶ್, ಎಂ.ಪಿ. ಲತಾ, ಶ್ರೀನಿವಾಸ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago