ರೈತರಿಗೆ ಮುಖ್ಯ ಮಾಹಿತಿ : ‘ಕಿಸಾನ್ ಸಮ್ಮಾನ್’ ಸೌಲಭ್ಯ ಪಡೆಯಲು ‘KYC’ ಕಡ್ಡಾಯ – Vishwanews24

Featured, ಉಡುಪಿ

ರೈತರಿಗೆ ಮುಖ್ಯ ಮಾಹಿತಿ : ‘ಕಿಸಾನ್ ಸಮ್ಮಾನ್’ ಸೌಲಭ್ಯ ಪಡೆಯಲು ‘KYC’ ಕಡ್ಡಾಯ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ಸೌಲಭ್ಯ ಪಡೆಯಲು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ.

ಜಿಲ್ಲೆಯ ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಟ್ಕಳ ಶಾಸಕ ಮಂಕಾಳ ವೈದ್ಯರಿಗೆ ಒಲಿದ ಅದೃಷ್ಟ : ಸಚಿವರಾಗಿ ಪ್ರಮಾಣ ವಚನ ಸ್ವೀಕಾರ – Vishwanews24

ಸಹಾಯಧನ ಪಡೆಯಲು ಇ-ಕೆವೈಸಿ ಕಡ್ಡಾಯ

ಉಡುಪಿ,ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದೆ. ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ಮೃತ್ಯು – Vishwanews24

Leave a Reply