Featured

ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ – ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ – vishwanews24

ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ – ಸಹಕಾರ ಬ್ಯಾಂಕ್ ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಚಳಿಗಾಲ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಮಾತನಾಡುತ್ತಿದ್ದ ಮುಖ್ಯಮಂತ್ರಿ, ಈ ಬಾರಿ ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಹಿನ್ನೆಲೆಯಲ್ಲಿ ರೈತರು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.

ಬಡ್ಡಿ ಒಟ್ಟು 300 ಕೋಟಿಯಷ್ಟು ಇರಬಹುದು.ಅದನ್ನು ಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. ಇನ್ನು ಬಳ್ಳಾರಿ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿದ್ದರಾಮಯ್ಯ ಘೋಷಿಸಿದರು. ರೈತರ ಬಡ್ಡಿ ಮನ್ನಾ ಘೋಷಣೆಗೆ ಮಾಜಿ ಸಹಕಾರ ಸಚಿವ ಶಾಸಕ ಎಸ್‌ಟಿ ಸೋಮಶೇಖರ್ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ಸಿದ್ದರಾಮಯ್ಯ ಮೊದಲು ಸಿಎಂ ಇದ್ದಾಗ 50 ಸಾವಿರದವರೆಗೆ ಸಾಲ ಮನ್ನಾ ಹಾಗೂ ಸಮ್ಮಿಶ್ರ ಸರ್ಕಾರದ ಅವಧಿಯ 1 ಲಕ್ಷದವರೆಗಿನ ಸಾಲಮನ್ನಾ ಆಗಿತ್ತು. ಈ ಸಾಲಮನ್ನಾ ಮಾಡಲು ಯಡಿಯೂರಪ್ಪ ಸಿಎಂ ಇದ್ದಾಗ 5,700 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಇನ್ನೂ 320 ಕೋಟಿ ರೂ ಬಾಕಿ ಕೊಡಬೇಕಿದೆ. ಈ ಬಾಕಿ ಹಣ ಕೊಟ್ರೆ ಸಹಕಾರ ವಲಯದ ಸಾಲ ಮನ್ನಾ ಪೂರ್ಣ ಆಗಲಿದೆ ಅಂತ ಸೋಮಶೇಖರ್ ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರೈತರ 2ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಬರದಿಂದ ಕಂಗೆಟ್ಟ ರೈತರಿಗೆ ಪ್ರತೀ ಎಕರೆಗೆ 25 ಸಾವಿರ ಪರಿಹಾರ ಘೋಷಣೆ ಮಾಡಬೇಕು ಅಂತ ಆಗ್ರಹಿಸಿದರು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago