ಬೆಂಗಳೂರು: ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣಕ್ಕೆ ಸರ್ಕಾರಿ ಪಡ, ಬೀಳು ಎಂದು ದಾಖಲಿಸಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಮೂಲಕ ಸರ್ಕಾರಿ ಜಮೀನು ಮಾಡುತ್ತಿದ್ದು, ಸಕ್ರಮಕ್ಕೆ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ವಿಧಾನಸಭೆಯಲ್ಲಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಕೇಳಿದಂತ ಪ್ರಶ್ನೆಗೆ ಉತ್ತರಿಸಿದ್ದು, ಕಂದಾಯ ಪಾವತಿಸದ ಕಾರಣಕ್ಕೆ ಸರ್ಕಾರಿ ಪಡ, ಬೀಳು ಎಂದು ದಾಖಲಿಸಿರುವ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಮತ್ತೊಮ್ಮೆ ಅರ್ಜಿ ಆಹ್ವಾನಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಪರಿಶೀಲಿಸಲಾಗುವುದು ಎಂದರು.
ರಾಜ್ಯದಲ್ಲಿ ಕಂದಾಯ ಪಾವತಿಸದ ಕಾರಣ ಪಹಣಿಗಳಲ್ಲಿ ಬೀಳು ಎಂದು ದಾಖಲು ಮಾಡಿದ್ದ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿ ಕರೆದಿದ್ದ ಅವಧಿಯಲ್ಲಿ, ಸಾಕಷ್ಟು ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹಾಗಾಗೀ ಪುನಹ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಸರ್ಕಾರದ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದಂತ ಸಚಿವ ಮಾಧುಸ್ವಾಮಿ, ಸಕ್ರಮಗೊಳಿಸಲು 2014ರಲ್ಲಿ ಅರ್ಜಿ ಕರೆಯಲಾಗಿದ್ದು. ಜಿಲ್ಲಾಧಿಕಾರಿಗಳು, ಈಗ ಅರ್ಜಿ ಪರಿಶೀಲಿಸಿ ಇತ್ಯರ್ಥಪಡಿಸುತ್ತಾ ಬಂದಿದ್ದಾರೆ. ರೈತರ ಅನುಕೂಲಕ್ಕಾಗಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…